ಸುಳ್ಯ ತಾಲೂಕು ಮಟ್ಟದ ಪ್ರಾಥಮಿಕ ಶಾಲೆಯ ಬಾಲಕ ಬಾಲಕಿಯರ ತ್ರೋಬಾಲ್ ಪಂದ್ಯಾಟ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 22. ಶಾಲಾ ಶಿಕ್ಷಣ ಇಲಾಖೆ ಸುಳ್ಯ ದ.ಕ. ಹಾಗೂ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಅರಂತೋಡು ಇದರ ಆಶ್ರಯದಲ್ಲಿ ಸುಳ್ಯ ತಾಲ್ಲೂಕು ಮಟ್ಟದ ಪ್ರಾಥಮಿಕ ಶಾಲೆಯ ಬಾಲಕ ಬಾಲಕಿಯರ ತ್ರೋಬಾಲ್ ಪಂದ್ಯಾಟವು ಆರಂತೋಡು ಶಾಲಾ ಮೈದಾನದಲ್ಲಿ ನಡೆಯಿತು.


ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್.ಡಿ.ಎಮ್.ಸಿ.ಅಧ್ಯಕ್ಷ ಸುರೇಶ್ ಉಳುವಾರು ವಹಿಸಿದ್ದರು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಅರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷ ಕೇಶವ ಅಡ್ತಲೆ ಉದ್ಘಾಟಿಸಿದರು. ವೇದಿಕೆಯಲ್ಲಿ ಅರಂತೋಡು ಗ್ರಾಮ ಪಂಚಾಯತ್ ಸದಸ್ಯ ರಾದ ಮಾಲಿನಿ, ಪುಷ್ಪಾಧರ, ಸುಳ್ಯ ತಾಲ್ಲೂಕು ದೈಹಿಕ ಶಿಕ್ಷಕ ಪರಿವೀಕ್ಷಕ ಅಧಿಕಾರಿ ಸೂಫಿ ಪೆರಾಜೆ, ನಿವೃತ್ತ ಶಿಕ್ಷಕ ಎ.ವಿ.ತೀರ್ಥರಾಮ ಅದ್ಕಬಳೆ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸತೀಶ್ ನಾಯ್ಕ್, ಗಾಂಧಿನಗರ ಶಾಲಾ ಶಿಕ್ಷಕಿ ಭವಾನಿ, ಮುಖ್ಯ ಶಿಕ್ಷಕ ದೇವರಾಜ್, ದೈಹಿಕ ಶಿಕ್ಷಕ ಧನಂಜಯ ಮೆರ್ಕಜೆ, ಅರಂತೋಡು ಬದ್ರಿಯಾ ಜುಮ್ಮಾ ಮಸೀದಿ ಅಧ್ಯಕ್ಷ ಆಶ್ರಫ್ ಗುಂಡಿ, ಶಾಲಾ ದೈಹಿಕ ಶಿಕ್ಷಕಿ ಸರಸ್ವತಿ, ಅನ್ವಾರುಲ್ ಹುದಾ ಯಂಗ್ ಮೆನ್ಸ್ ಎಸೋಸಿಯೇಷನ್ ಕಾರ್ಯದರ್ಶಿ ಜುಬೈರ್ ಮೊದಲಾದವರು ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕ ಗೋಪಾಲಕೃಷ್ಣ ಬನ ಸ್ವಾಗತಿಸಿ ಶಿಕ್ಷಕಿ ಭಾನುಮತಿ ಕಾರ್ಯಕ್ರಮ ನಿರೂಪಿಸಿದರು.

Also Read  ಸುಳ್ಯ: ಅಪರಿಚಿತ ಮೃತದೇಹದ ಗುರುತು ಪತ್ತೆ ➤ ಪಂಜದ ಗಣೇಶ್ ಚೀಮುಳ್ಳು ಆತ್ಮಹತ್ಯೆಗೆ ಶರಣಾದ ವ್ಯಕ್ತಿ

error: Content is protected !!
Scroll to Top