ಪುತ್ತೂರು: ನಾಳೆ (ಸೆ.23) ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 22. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಪುತ್ತೂರು ತಾಲೂಕು ಪಂಚಾಯತ್ ಹಾಗೂ ಪುತ್ತೂರು ನಗರಸಭೆ ಅವರ ಸಹಯೋಗದಲ್ಲಿ ಪುತ್ತೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಸೆ. 23ರಂದು ಪುತ್ತೂರಿನ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಫರೀದ್ ಅವರು ಘನ ಉಪಸ್ಥಿತಿ ವಹಿಸುವರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಕಾರ್ಯಕ್ರಮ ಉದ್ಘಾಟಿಸುವರು. ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರಾದ ಬಿ. ನಾಗೇಂದ್ರ ಗೌರವ ಉಪಸ್ಥಿತಿ ವಹಿಸುವರು. ಶಾಸಕರಾದ ಅಶೋಕ್ ಕುಮಾರ್ ರೈ. ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಸಂಸದರಾದ ನಳಿನ್ ಕುಮಾರ್ ಕಟೀಲ್, ರಾಜ್ಯಸಭಾ ಸಂಸದರಾದ ವೀರೇಂದ್ರ ಹೆಗ್ಗಡೆ, ಶಾಸಕರಾದ ಡಾ. ಭರತ್ ಶೆಟ್ಟಿ ವೈ, ಹರೀಶ್ ಪೂಂಜ, ರಾಜೇಶ್ ನಾಯ್ಕ್ ಯು., ಭಾಗೀರಥಿ ಮುರುಳ್ಯ, ಡಿ. ವೇದವ್ಯಾಸ ಕಾಮತ್, ಉಮಾನಾಥ ಎ. ಕೋಟ್ಯಾನ್, ವಿಧಾನ ಪರಿಷತ್ ಶಾಸಕರಾದ ಕೋಟ ಶ್ರೀನಿವಾಸ ಪೂಜಾರಿ, ಬಿ.ಎಂ. ಫಾರೂಕ್, ಕೆ. ಹರೀಶ್ ಕುಮಾರ್, ಎಸ್.ಎಲ್. ಭೋಜೇಗೌಡ, ಪ್ರತಾಪ ಸಿಂಹ ನಾಯಕ್, ಕೆ. ಮಂಜುನಾಥ ಭಂಡಾರಿ ಅವರು ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

error: Content is protected !!

Join the Group

Join WhatsApp Group