ಸುಳ್ಯ: ಸತ್ಯಾಪನೆ ಮುದ್ರೆ ಶಿಬಿರ ಆರಂಭ- ವ್ಯಾಪಾರಸ್ಥರು ಸದುಪಯೋಗ ಪಡೆದುಕೊಳ್ಳುವಂತೆ ಮನವಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 22. ಪುತ್ತೂರಿನ ಕಾನೂನು ಮಾಪನಶಾಸ್ತ್ರ ನಿರೀಕ್ಷಕರ ಕಚೇರಿಯಿಂದ ತೂಕ, ಅಳತೆ ಮತ್ತು ತೂಕದ ಸಾಧನಗಳ 2023ನೇ ಸಾಲಿನ ವಾರ್ಷಿಕ ಸತ್ಯಾಪನೆ ಮುದ್ರೆ ಶಿಬಿರವು ಸುಳ್ಯದ ಗಾಂಧಿನಗರ ಸರ್ಕಾರಿ ಪ್ರೌಢಶಾಲೆ ಮೈದಾನದ ಎದುರಿನಲ್ಲಿರುವ ಎಸ್.ಜಿ ಸ್ಟೋರ್ ಬಿಲ್ಡಿಂಗ್‍ನ ಮೊದಲನೇ ಮಹಡಿಯಲ್ಲಿ ಆರಂಭವಾಗಿದೆ.

ಸುಳ್ಯ ಶಿಬಿರ ವ್ಯಾಪ್ತಿಯಲ್ಲಿನ ಜಾಲ್ಸೂರು, ಸುಳ್ಯ, ಅಜ್ಜಾವರ, ಕಲ್ಲುಗುಂಡಿ, ಕುಕ್ಕುಜಡ್ಕ, ದೊಡ್ಡತೋಟ, ಎಲಿಮಲೆ, ಮಂಡೆಕೋಲು, ಸಂಪಾಜೆ, ಉಬರಡ್ಕ, ಉಬರಡ್ಕ ಮಿತ್ತೂರು, ಕನಕಮಜಲು, ಮರ್ಕಂಜ, ತೋಡಿಕಾನ, ಅರಂತೋಡು, ಕೊಡಿಯಾಳ, ಆಲೆಟ್ಟಿ ವ್ಯಾಪ್ತಿಯ ವ್ಯಾಪಾರಸ್ಥರು ಮತ್ತು ತೂಕ ಮತ್ತು ಅಳತೆ ಸಾಧನಗಳ ಬಳಕೆದಾರರು ತಾವು ಬಳಸುವ ತೂಕ, ಅಳತೆ ಮತ್ತು ತೂಕದ ಸಾಧನಗಳನ್ನು ಪ್ರತಿ ಶುಕ್ರವಾರ ಹಾಜರುಪಡಿಸಿ ಸದುಪಯೋಗ ಪಡೆದುಕೊಳ್ಳಬಹುದು. ಸತ್ಯಾಪನೆ ಮುದ್ರೆ ಮಾಡಿಸುವ ಶಿಬಿರ ನವೆಂಬರ್ 8ರಂದು ಮುಕ್ತಾಯಗೊಳ್ಳುತ್ತದೆ ಎಂದು ಪುತ್ತೂರು ಉಪವಿಭಾಗದ ಕಾನೂನು ಮಾಪನಶಾಸ್ತ್ರ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ನಾಲ್ಕು ವರ್ಷ ಪ್ರಾಯದ ಬಾಲಕಿಗೆ ಲೈಂಗಿಕ ದೌರ್ಜನ್ಯ ➤ ಬೆಳ್ತಂಗಡಿಯಲ್ಲಿ ನಡೆಯಿತು ಪೈಶಾಚಿಕ ಕೃತ್ಯ

error: Content is protected !!
Scroll to Top