ರಾಜ್ಯದ ಹಲವೆಡೆ ವರ್ಷದ ಮೊದಲ ತುಂತುರು ಮಳೆಯ ಅನುಭವ ► ಇನ್ನೆರಡು ದಿನಗಳ ಕಾಲ ಮಳೆಯ ಸಾಧ್ಯತೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.08. ರಾಜ್ಯದ ಹಲವೆಡೆ ತುಂತುರು ಮಳೆಯಾಗಿದ್ದು, ಈ ವರ್ಷದ ಮೊದಲ ಮಳೆ ಹನಿಯು ಭೂಮಿಯನ್ನು ಸ್ಪರ್ಶಿಸಿದೆ‌.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಪರಿಣಾಮ ಇನ್ನು ಎರಡು ದಿನಗಳ ಕಾಲ ರಾಜ್ಯದ ಕರಾವಳಿ ಭಾಗ, ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬಂಗಾಳಕೊಲ್ಲಿಯ ನೈರುತ್ಯ ಭಾಗದಲ್ಲಿ ಹಾಗೂ ಮಾಲ್ಡೀವ್ಸ್ ನಿಂದ ಕರ್ನಾಟಕದ ಕರಾವಳಿ ಪ್ರದೇಶದವರೆಗೆ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ಎರಡು ದಿನಗಳ ಕಾಲ ಮಳೆಯಾಗಲಿದೆ ಎನ್ನಲಾಗುತ್ತಿದೆ.

Also Read  ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡ್ ಆಯಿತು "#KFC ಕನ್ನಡ ಬೇಕು"..!

error: Content is protected !!
Scroll to Top