(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 22. ಉಜಿರೆ ಗ್ರಾಮ ಪಂಚಾಯತ್‍ಗೆ ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳಾದ ವಿಕಾಸ್ ಶ್ರೀ ವಾಸ್ತವ್ ಅವರು ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಭೇಟಿ ನೀಡಿದರು.
ಉಜಿರೆ ಗ್ರಾಮ ಪಂಚಾಯತ್ ನ ತ್ಯಾಜ್ಯ ಸಂಪನ್ಮೂಲ ಘಟಕ, ಪ್ಲಾಸ್ಟಿಕ್ ಮರು ಉತ್ಪಾದನಾ ಘಟಕ ಮತ್ತು ಮಲ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ ನೀಡಿದ ಅವರು ಘಟಕದ ಕಾರ್ಯನಿರ್ವಹಣೆಯ ಕುರಿತು ಪರಿಶೀಲನೆ ನಡೆಸಿದರು. ಬಳಿಕ, ಉಜಿರೆ ಗ್ರಾಮ ಪಂಚಾಯತ್ ಕಚೇರಿಗೆ ಹಾಗೂ ಡಿಜಿಟಲ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಕ್ಕೆ ಸಂದರ್ಶಿಸಿ, ಗ್ರಾಮ ಪಂಚಾಯತ್ ನ ಕಾರ್ಯನಿರ್ವಹಣೆಯ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಉಷಾ ಕಿರಣ್, ಕಾರ್ಯ ನಿರ್ವಹಣಾಧಿಕಾರಿ ಕುಸುಮಾಧರ್, ಎ.ಇ.ಇ ನಿತಿನ್ ಕುಮಾರ್, ಸಹಾಯಕ ಇಂಜಿನಿಯರ್ ಹರ್ಷಿತ್, ಗ್ರಾಮ ಪಂಚಾಯತ್ ಸದಸ್ಯರು, ಜಿಲ್ಲಾ ಸಂಯೋಜಕರಾದ ಡೊಂಬಯ್ಯ ಇಡ್ಕಿದು, ಕಾರ್ಯದರ್ಶಿ ಶ್ರವಣ್ ಕುಮಾರ್, ಸ್ವಚ್ಛತಾ ಸಿಬ್ಬಂದಿ ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಕೊಕ್ಕಡಕ್ಕೆ ಭೇಟಿ: ನಂತರ ಕೊಕ್ಕಡ ಗ್ರಾಮ ಪಂಚಾಯತ್‍ಗೆ ಭೇಟಿ ನೀಡಿದ ಅವರು, ಕೊಕ್ಕಡ ಗ್ರಾಮ ಪಂಚಾಯತ್ ನ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಬಳಿ ಗೋ ಶಾಲೆಯ ಗೋಬರ್ ಧನ್ ಘಟಕವನ್ನು ಪರಿಶೀಲಿಸಿ ಘಟಕದ ಕಾರ್ಯನಿರ್ವಹಣೆಯ ಬಗ್ಗೆ ಮೆಚ್ಚಗೆ ವ್ಯಕ್ತಪಡಿಸಿದರು. ಬಳಿಕ ಕೊಕ್ಕಡ ಪಂಚಾಯತ್ ವ್ಯಾಪ್ತಿಯ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಬೇಟಿ ನೀಡಿ ಪ್ರಸಾದ ಸ್ವೀಕರಿಸಿದರು.
ಸುಬ್ರಹ್ಮಣ್ಯಕ್ಕೆ ಭೇಟಿ:– ನಂತರ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್‍ಗೆ ಭೇಟಿ ನೀಡಿದ ಅವರು, ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಶ್ರೀ ಸಂಪುಟ ನರಸಿಂಹ ಸ್ವಾಮಿ ಗೋಶಾಲೆಯಲ್ಲಿ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯಡಿ ಅನುಷ್ಠಾನವಾಗಿರುವ ಗೋಬರ್-ಧನ್ ಘಟಕವನ್ನು ಪರಿಶೀಲಿಸಿ ಘಟಕದ ಕಾರ್ಯ ನಿರ್ವಹಣೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುಜಾತ, ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ವೆಂಕಟೇಶ ಹೆಚ್.ಎಲ್., ಗ್ರಾಮ ಪಂಚಾಯತ್ ಸದಸ್ಯರಾದ ಭಾರತಿ ಬಿ.ಎನ್., ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್, ಸಹಾಯಕ ಇಂಜಿನಿಯರ್ ಜನಾರ್ಧನ, ಜಿಲ್ಲಾ ಸಂಯೋಜಕರಾದ ಪವನ್ ಕುಮಾರ್ ಶೆಟ್ಟಿ, ಡೊಂಬಯ್ಯ ಇಡ್ಕಿದು, ಸಂಪುಟ ನರಸಿಂಹ ಮಠದ ದಿವಾನರಾದ ಸುದರ್ಶನ್ ಜೋಯಿಸರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೋನಪ್ಪ ಉಪಸ್ಥಿತರಿದ್ದರು.