ರೂಮಿನಲ್ಲಿ ಮಲಗಿದ್ದ ಯುವತಿಗೆ ಕಿಟಕಿ ಮೂಲಕ ಲೈಂಗಿಕ ಕಿರುಕುಳಕ್ಕೆ ಯತ್ನ – ದೂರು ದಾಖಲು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 22. ಮನೆಯ ಕೋಣೆಯಲ್ಲಿ ಮಲಗಿದ್ದ ಯುವತಿಗೆ ಕೋಣೆಯ ಕಿಟಕಿ ಬಾಗಿಲು ತೆರೆದು ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ಘಟನೆ ತಾಲೂಕಿನ ಕಲ್ಲಡ್ಕ ಸಮೀಫದ ಬಾಳ್ತಿಲ ಗ್ರಾಮದ ಕುದ್ರೆಬೆಟ್ಟು ಎಂಬಲ್ಲಿ ನಡೆದಿದ್ದು, ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಆರೋಪಿ ವಿಶ್ವನಾಥ ಎಂದು ಗುರುತಿಸಲಾಗಿದೆ. ದೂರುದಾರರ ಪ್ರಕಾರ, ಮನೆಯ ಕೋಣೆಯ ಕಿಟಕಿಯ ಪರದೆಯನ್ನು ಸರಿಸಿ ಬಳಿಕ ಕಿಟಕಿ ಮೂಲಕ ಲೈಂಗಿಕ ಕಿರುಕುಳ ನೀಡುವ ಉದ್ದೇಶದಿಂದ ವಿಶ್ವನಾಥ ಇಣುಕಿ ನೋಡುತ್ತಿದ್ದ. ಈತ ಕಿಟಕಿಯ ಬಳಿ ನಿಂತು ಇಣುಕಿ ನೋಡುತ್ತಿದ್ದನ್ನು ಗಮನಿಸಿ ದೂರುದಾರರು ಜೋರಾಗಿ ಕಿರುಚಿದಾಗ ಅಲ್ಲಿಂದ ಓಡಿ ಹೋಗಿದ್ದಾನೆ. ಈತ ನೆರೆಮನೆಯವನಾಗಿದ್ದು, ಈತನ ಬಗ್ಗೆ ಪೋಲೀಸರಿಗೆ ದೂರು ನೀಡಿದ್ದಾರೆ. ದೂರುದಾರರ ತಂದೆ ನಿಧನ ಹೊಂದಿದ್ದು, ತಾಯಿ ಹಾಗೂ ಮೂವರು ಹೆಣ್ಣುಮಕ್ಕಳು ಮನೆಯಲ್ಲಿ ಇದ್ದಾರೆ. ಮನೆಯಲ್ಲಿ ಮಹಿಳೆಯರೇ ಇರುವ ಕಾರಣ ಈತ ರಾತ್ರಿ ವೇಳೆ ಲೈಂಗಿಕ ಕಿರುಕುಳ ನೀಡಲು ಬಂದಿದ್ದ ಎಂದು ಸ್ಥಳೀಯರು ಹೇಳಿದ್ದಾರೆ. ಈತನನ್ನು ಬಂಧಿಸಿ ಸೂಕ್ತವಾದ ಕಾನೂನು ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಪೋಲೀಸರಿಗೆ ಮನವಿ ಮಾಡಿದ್ದಾರೆ ಎಂದು ಹೇಳಲಾಗಿದೆ.

Also Read  ಕಡಬ: ಸರಸ್ವತೀ ವಿದ್ಯಾಲಯದಲ್ಲಿ ವಿಶ್ವ ಹಿಂದಿ ದಿವಸ್ ಆಚರಣೆ

error: Content is protected !!
Scroll to Top