ಡ್ರಿಂಕ್ & ಡ್ರೈವ್- ಬೈಕ್ ಢಿಕ್ಕಿ; ಯುವಕರಿಬ್ಬರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.  22. ಕಂಬವೊಂದಕ್ಕೆ ಬಿಎಂಡಬ್ಲ್ಯು ಬೈಕ್ ಡಿಕ್ಕಿ ಹೊಡೆದ ಪರಿಣಾಮ ಯುವಕರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಂಗಳೂರಿನ ಯಶವಂತಪುರದ ಆರ್‌ಎಂಸಿ ಯಾರ್ಡ್‌ ಬಳಿ ಶುಕ್ರವಾರ ಮುಂಜಾನೆ 3.30ರ ಸುಮಾರಿಗೆ ಸಂಭವಿಸಿದೆ.

ಮೃತ ಯುವಕರನ್ನು ಮನಮೋಹನ್‌ ಹಾಗೂ ನಿಖಿಲ್‌ ಎಂದು ಗುರುತಿಸಲಾಗಿದೆ. ಇವರಿಬ್ಬರು ಮದ್ಯ ಸೇವಿಸಿದ್ದರು ಹಾಗೂ ಅತಿವೇಗದಿಂದ ಬೈಕ್ ಚಾಲನೆ ಮಾಡಿದ್ದ ಇವರು ಹೆಲ್ಮೆಟ್ ಕೂಡ ಧರಿಸಿರಲಿಲ್ಲ. ಸ್ನೇಹಿತರ ಜೊತೆ ಪಾರ್ಟಿ ಮುಗಿಸಿ ಮನೆಗೆ ವಾಪಸಾಗುತ್ತಿದ್ದರು ಎನ್ನಲಾಗಿದೆ. ಯಶವಂತಪುರ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Scroll to Top