ಹೊರ ರಾಜ್ಯಗಳಿಗೆ ಮೇವು ಸಾಗಾಟ ನಿಷೇಧ -ಸಚಿವ ಕೆ.ವೆಂಕಟೇಶ್

(ನ್ಯೂಸ್ ಕಡಬ) newskadaba.com ಮೈಸೂರು, ಸೆ. 22. ರಾಜ್ಯದಲ್ಲಿ ಬರಗಾಲ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆ ಹೊರ ರಾಜ್ಯಗಳಿಗೆ ಮೇವು ಸಾಗಾಟವನ್ನು ನಿಲ್ಲಿಸುವ ಅನಿವಾರ್ಯತೆ ಎದುರಾಗಿದೆ ಎಂದು ಪಶುಸಂಗೋಪನೆ ಖಾತೆ ಸಚಿವ ಕೆ ವೆಂಕಟೇಶ್ ಹೇಳಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇವು ಸಾಗಾಣಿಕೆ ನಿಷೇಧಕ್ಕೆ ಸಂಬಂಧಿಸಿ ಜಿಲ್ಲಾಧಿಕಾರಿಗೆ ಸೂಚನೆ ನೀಡಲಾಗಿದ್ದು, ಸದ್ಯಕ್ಕೆ ಕುಡಿಯುವ ನೀರಿ‌ನ ಕೊರತೆ ಉಂಟಾಗಿಲ್ಲ‌. ಮುಂದೆ ಯಾವುದೇ ಪರಿಸ್ಥಿತಿ ಎದುರಾದರೂ ನಿಭಾಯಿಸಲು ಸಿದ್ದರಾಗಿದ್ದೇವೆ ಎಂದರು. ಇನ್ನು ಕಾವೇರಿ ಜಲವಿವಾದ ವಿಚಾರದಲ್ಲಿ ರಾಜ್ಯ ಸರ್ಕಾರ ಸಮರ್ಥವಾಗಿ ವಾದ ಮಂಡಿಸಿದೆ. ಆದರೆ ನೀರು ನಿರ್ವಹಣಾ ಪ್ರಾಧಿಕಾರ ನೀರು ಬಿಡುವಂತೆ ಆದೇಶಿಸಿದೆ. ಈ ವಿಚಾರದಲ್ಲಿ ನಮ್ಮಲ್ಲಿ ಒಗ್ಗಟ್ಟು ಇದೆ. ಆದರೂ ಕೆಲವರು ಈ ವಿಚಾರದಲ್ಲೂ ರಾಜಕೀಯ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

Also Read  ವಕ್ಫ್ ಬೋರ್ಡ್ ಮೂಲಕ ರೈತರಿಗೆ ನೋಟಿಸ್ ನೀಡುವ ವಿರುದ್ಧ ರಾಜ್ಯಾದ್ಯಂತ ಹೋರಾಟ

error: Content is protected !!
Scroll to Top