ಮಟ್ಕಾ ದಂಧೆ- ಇಬ್ಬರು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 22. ಅಕ್ರಮವಾಗಿ ಸಾರ್ವಜನಿಕರಿಂದ ಹಣ ಸಂಗ್ರಹಿಸಿ, ಮಟ್ಕಾ ಚೀಟಿ ಬರೆಯುತ್ತಿದ್ದ ವೇಳೆ ದಾಳಿ ನಡೆಸಿದ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದ ಘಟನೆ ಬಂಟ್ವಾಳ ಮೂಡ ಗ್ರಾಮದ ಕೈಕಂಬ ಜಂಕ್ಷನ್ ಬಳಿ ನಡೆದಿದೆ.

ಬಂಧಿತರನ್ನು ಚಂದ್ರಹಾಸ ಮತ್ತು ಪುರುಷೋತ್ತಮ ಎಂದು ಗುರುತಿಸಲಾಗಿದೆ. ಕೈಕಂಬ ಜಂಕ್ಷನ್ ಬಳಿ ಅಕ್ರಮವಾಗಿ ಸಾರ್ವಜನಿಕರಿಂದ ಹಣ ಸಂಗ್ರಹ ಮಾಡಿ, ಮಟ್ಕಾ ಚೀಟಿ ಬರೆಯುತ್ತಿರುವ ವೇಳೆ ದಾಳಿ ನಡೆಸಿದ ಬಂಟ್ವಾಳ ನಗರ ಠಾಣಾ ಉಪನಿರೀಕ್ಷಕರು ಮತ್ತು ಸಿಬ್ಬಂದಿಗಳ ತಂಡ, ಕೃತ್ಯದಲ್ಲಿ ತೊಡಗಿದ್ದ ಇಬ್ಬರನ್ನು ವಶಕ್ಕೆ ಪಡೆದು, ಅವರಿಂದ ಮಟ್ಕಾ ಚೀಟಿ ಬರೆಯುತ್ತಿದ್ದ ಪುಸ್ತಕ, ಪೆನ್ನು, 1770 ರೂ. ನಗದು ಹಾಗೂ ಕಾರ್ಬನ್ ಹಾಳೆಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಅಷ್ಟಮಿ, ಚೌತಿ, ವರಮಹಾಲಕ್ಷ್ಮೀ ಹಬ್ಬಗಳನ್ನು ಸಾರ್ವಜನಿಕವಾಗಿ ಆಚರಿಸುವಂತಿಲ್ಲ ➤ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟನೆ

error: Content is protected !!
Scroll to Top