ಪ್ರಚೋದನಕಾರಿ ಹೇಳಿಕೆ ಆರೋಪ- ಮುತಾಲಿಕ್ ಗಡಿಪಾರಿಗೆ ಆಗ್ರಹ

(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಸೆ. 22. ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅನ್ಯ ಧರ್ಮಗಳ ಭಾವನೆಗಳಿಗೆ ಆಘಾತವನ್ನುಂಟು ಮಾಡುವ ಉದ್ದೇಶದಿಂದ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆಂಬ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ಅವರನ್ನು ಹಾಗೂ ಅವರ ಕಾರ್ಯಕರ್ತರನ್ನು ಗಡಿ ಪಾರು ಮಾಡಬೇಕು ಎಂದು ಆಗ್ರಹಿಸಿ ಮುಸ್ಲಿಂ ನಾಯಕರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ರೇಣುಕಾ ಸುಕುಮಾರ ಅವರಿಗೆ ದೂರು ನೀಡಿದ್ದಾರೆ.

ಹುಬ್ಬಳ್ಳಿ ರಾಣಿ ಚೆನ್ನಮ್ಮ ಈದ್ಗಾ ಮೈದಾನದಲ್ಲಿ ಗಣೇಶ ವಿಸರ್ಜನೆ ಸಂದರ್ಭ ಮುತಾಲಿಕ್​​ ಭೇಟಿ ನೀಡಿ, ಗಣೇಶ ದರ್ಶನ ಪಡೆದುಕೊಂಡಿದ್ದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ್ದ ಅವರು, ಗಣೇಶ ಮೂರ್ತಿ ಪ್ರತಿಷ್ಠಾಪನೆಯನ್ನು ವಿರೋಧಿಸುವವರು ದೇಶದ್ರೋಹಿಗಳು. ಅಂಜುಮನ್ ಸಂಸ್ಥೆಯವರ ದುರುದ್ದೇಶ ಏನೆಂದು ಎಲ್ಲರಿಗೂ ಗೊತ್ತಾಗಿದೆ. ಇವರು ದೇಶ ವಿಭಜನೆ ಮಾಡಿದ ದ್ರೋಹಿಗಳು. ಮಸೀದಿಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡುವ ತಾಕತ್ತು ಹಿಂದೂ ಸಮಾಜಕ್ಕಿದೆ. ನಿಮ್ಮ ನಮಾಜ್‌ಗೂ ನಾವು ಅಡ್ಡಿಪಡಿಸಬೇಕಾಗುತ್ತದೆ. ರಾಣಿ ಚೆನ್ನಮ್ಮ ಮೈದಾನದಲ್ಲಿ ನಮಾಜ್‌ಗೆ ಅವಕಾಶ ಕೊಡದಂತೆ ಕೋರ್ಟ್‌ಗೆ ಹೋಗುತ್ತೇವೆ. ಇದು ಪಾಕಿಸ್ತಾನವಲ್ಲ, ನಿಮ್ಮಪ್ಪನ ಆಸ್ತಿಯಲ್ಲ, ವಿರೋಧಿಗಳ ಸೊಕ್ಕಡಗಿಸುವ ತಾಕತ್ತು ನಮಗಿದೆ ಎಂದು ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

Also Read  ಮಂಗಳೂರು: ಸಂವಿಧಾನ ಜಾಥಾಕ್ಕೆ ಅದ್ಧೂರಿ ಸ್ವಾಗತ

ಈ ಪ್ರಕರಣದ ಬಗ್ಗೆ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ರೇಣುಕಾ ಸುಕುಮಾರ ಪ್ರತಿಕ್ರಿಯೆ ನೀಡಿದ್ದು, ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣೆಯಲ್ಲಿ ಕಲಂ 153(ಎ), 295(ಎ) ಐಪಿಸಿ ಅಡಿ ಪ್ರಕರಣ ದಾಖಲು ಮಾಡಲಾಗಿದೆ. ಮಹಾನಗರ ಪಾಲಿಕೆ 8 ವಲಯದ ಸಹಾಯ ಆಯುಕ್ತ ಚಂದ್ರಶೇಖರಗೌಡ ಎಂಬವರು ದೂರು ನೀಡಿದ್ದಾರೆ. ನಾನು ಸಹ ಗಡಿಪಾರು ಸಲುವಾಗಿ ಚಿಂತನೆ ನಡೆಸಿದ್ದೇವೆ ಎಂಬುವುದಾಗಿ ವರದಿಯಾಗಿದೆ.

Also Read  ಇಂದು(ಮೇ.15) SSLC ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನ

error: Content is protected !!
Scroll to Top