ಮಂಗಳೂರು: ಸಿಸಿಬಿ ಕಾರ್ಯಾಚರಣೆ- ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರ ಸೆರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 22. ನಗರದಾದ್ಯಂತ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ ಘಟನೆ ಮಂಗಳುರಿನಲ್ಲಿ ನಡೆದಿದೆ. ಡ್ರಗ್ಸ್ ಫ್ರೀ ಮಂಗಳೂರು ನಿಟ್ಟಿನಲ್ಲಿ ಪೊಲೀಸರು ತೀವ್ರ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

ಬಂಧಿತರನ್ನು ಉಪ್ಪಿನಂಗಡಿಯ ಪಿ.ಎಸ್. ಅಬ್ದುಲ್ ಅಜೀಜ್ ಮತ್ತು ಸುರತ್ಕಲ್ ನ ಅಕ್ಷಿತ್ ಕುಮಾರ್ ಎಂದು ಗುರುತಿಸಲಾಗಿದೆ. ಬಂಧಿತರಿಂದ ಒಟ್ಟು 35 ಗ್ರಾಂ. ತೂಕದ 1,75,000 ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತು, 2 ಮೊಬೈಲ್ ಫೋನ್, 600 ರೂ. ನಗದು ಹಾಗೂ ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದ್ದು, ಇವುಗಳ ಒಟ್ಟು ಮೊತ್ತ ರೂ 1,96,000 ಆಗಬಹುದು ಎಂದು ಅಂದಾಜಿಸಲಾಗಿದೆ. ಆರೋಪಿಗಳ ವಿರುದ್ಧ ಮಂಗಳೂರು ಉತ್ತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಪತ್ತೆ ಕಾರ್ಯ ಮುಂದುವರಿದಿದೆ.

Also Read  ➤ ಅಮೆಜಾನ್‌ ಅರಣ್ಯದಲ್ಲಿ ತಿಂಗಳು ಕಳೆದ ಯುವಕ!

ಆರೋಪಿಗಳ ಪೈಕಿ ಅಜೀಜ್ ಎಂಬಾತನ ವಿರುದ್ಧ ಮಾದಕ ವಸ್ತು ಮಾರಾಟಕ್ಕೆ ಸಂಬಂಧಿಸಿ ಉಪ್ಪಿನಂಗಡಿ, ವಿಟ್ಲ ಹಾಗೂ ಉರ್ವಾ ಠಾಣೆಯಲ್ಲಿ ಮೂರು ಪ್ರಕರಣ ದಾಖಲಾಗಿದ್ದು, ಇತ್ತೀಚೆಗೆ ಸುಮಾರು 15 ದಿನಗಳ ಹಿಂದೆ ನ್ಯಾಯಾಲಯದಿಂದ ಜಾಮೀನು ಪಡೆದು ಬಿಡುಗಡೆಗೊಂಡಿದ್ದ ಈತ ಮತ್ತೆ ಅದೇ ಮಾದಕ ವಸ್ತು ಮಾರಾಟ ದಂಧೆ ನಡೆಸುತ್ತಿದ್ದನು ಎನ್ನಲಾಗಿದೆ.

error: Content is protected !!
Scroll to Top