ಸಿಲಿಂಡರ್ ಸೋರಿಕೆಯಿಂದ ಬೆಂಕಿ ಅವಘಡ- ಗಂಭೀರ ಗಾಯಗೊಂಡಿದ್ದ ದಂಪತಿ ಮೃತ್ಯು



(ನ್ಯೂಸ್ ಕಡಬ) newskadaba.com ಕೋಲಾರ, ಸೆ. 22. ಇತ್ತೀಚೆಗೆ ಕೋಲಾರ ತಾಲೂಕಿನ ಮಣಿಘಟ್ಟ ಬಳಿ ತೋಟದ ಮನೆಯೊಂದರಲ್ಲಿ ಗ್ಯಾಸ್ ಸೋರಿಕೆಯಾಗಿ ಸಿಲಿಂಡರ್ ಸಿಡಿದು ಬೆಂಕಿ ಕಾಣಿಸಿಕೊಂಡ ಪರಿಣಾಮ ಗಂಭೀರ ಗಾಯಗೊಂಡಿದ್ದ ದಂಪತಿ ಚಿಕಿತ್ಸೆ ಫಲಕಾರಿಯಾದೇ ಶುಕ್ರವಾರದಂದು ಮೃತಪಟ್ಟಿರುವ ಘಟನೆ ವರದಿಯಾಗಿದೆ.







ಮೃತ ದಂಪತಿಯನ್ನು ಗಿರೀಶ್ ಹಾಗೂ ನಂದಿನಿ ಎಂದು ಗುರುತಿಸಲಾಗಿದೆ. ಮೃತ ದಂಪತಿ ಮಧುಸೂಧನ್ ಎಂಬವರ ತೋಟದ ಮನೆಯಲ್ಲಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡಿಕೊಂಡು ವಾಸವಿದ್ದರು. ಸೆಪ್ಟಂಬರ್ 16 ರಂದು ಕಾಫಿ ಮಾಡುತ್ತಿದ್ದ ವೇಳೆ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಅವಘಡ ಸಂಭವಿಸಿ ದಂಪತಿಗೆ ಗಂಭೀರ ಗಾಯಗಳಾಗಿದ್ದು, ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಈ ಕುರಿತು ಕೋಲಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.






error: Content is protected !!
Scroll to Top