ನಾಳೆಯಿಂದ ಸೆ. 30ರ ವರೆಗೆ ಸಬ್ ರಿಜಿಸ್ಟ್ರಾರ್ ಕಚೇರಿಗಳ ಕೆಲಸದ ಅವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 22. ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕೇಂದ್ರ ಮೌಲ್ಯ ಮಾಪನ ಸಮಿತಿಯ 2023-24ನೆ ಸಾಲಿನಲ್ಲಿ ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯ ಮಾರ್ಗಸೂಚಿ ದರಗಳ ಪರಿಷ್ಕರಣೆ ಹಿನ್ನೆಲೆ, ದಸ್ತಾವೇಜುಗಳ ಸಂಖ್ಯೆ ಹೆಚ್ಚುವ ಕಾರಣ ಎಲ್ಲ ಉಪನೋಂದಣಿ ಕಚೇರಿಗಳ ಕೆಲಸದ ಅವಧಿಯನ್ನು ನಾಳೆಯಿಂದ (ಸೆ. 23) ಬೆಳಗ್ಗೆ 8ರಿಂದ ರಾತ್ರಿ 8ರ ವರೆಗೆ ಕಾರ್ಯ ನಿರ್ವಹಿಸಲು ಅವಧಿ ವಿಸ್ತರಿಸಿ ಆದೇಶಿಸಲಾಗಿದೆ. ಮುಂದಿನ ದಿನಗಳಲ್ಲಿ ನೋಂದಣಿಗೆ ಹಾಜರುಪಡಿಸುವ ದಸ್ತಾವೇಜುಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದ್ದು, ಸಾರ್ವಜನಿಕ ಹಿತದೃಷ್ಟಿಯಿಂದ ಸೆ.  23ರ ನಾಲ್ಕನೇ ಶನಿವಾರದಂದು ಈ ಅವಧಿಯಲ್ಲಿ ಕಾರ್ಯನಿರ್ವಹಿಸಬೇಕು. ಈ ಕೆಲಸದ ಅವಧಿಯು ಸೆ. 30ರ ವರೆಗೆ ಮಾತ್ರ ಜಾರಿಯಲ್ಲಿರುತ್ತದೆ. ಸಾರ್ವಜನಿಕರು ಇದರ ಸದುಪಯೋಗವನ್ನ ಪಡೆದುಕೊಳ್ಳಬಹುದು ಎಂದು ನೋಂದಣಿ ಮಹಾಪರಿವೀಕ್ಷಕರು ಮತ್ತು ಮುದ್ರಾಂಕಗಳ ಆಯುಕ್ತೆ ಬಿ.ಆರ್.ಮಮತಾ ತಿಳಿಸಿದ್ದಾರೆ.

Also Read  ಬೆಂಗಳೂರಿನಲ್ಲಿ ಮೊದಲ ಮುಂಗಾರು ಪೂರ್ವ ಮಳೆ ➤ ರಾಜಧಾನಿಯಲ್ಲಿ 3.4 ಮಿ.ಮೀ ವರ್ಷಧಾರೆ           

error: Content is protected !!
Scroll to Top