ಚೈತ್ರಾ ಹೆಸರಿನ ಜೊತೆ ‘ಕುಂದಾಪುರ’ ಬಳಸದಂತೆ ಕೋರ್ಟ್ ಮೊರೆ…!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 23. ಉದ್ಯಮಿಗೆ ಕೋಟ್ಯಾಂತರ ರೂ. ವಂಚನೆ ಆರೋಪದಲ್ಲಿ ಬಂಧನಕ್ಕೆ ಒಳಗಾಗಿರುವ ಚೈತ್ರಾಗೆ ಸಂಬಂಧಿಸಿದಂತೆ ಸುದ್ದಿ ಪ್ರಕಟ ಹಾಗೂ ಪ್ರಸಾರ ಮಾಡುವಾಗ ಕುಂದಾಪುರ ಹೆಸರು ಉಲ್ಲೇಖಿಸದಂತೆ ಮಾಧ್ಯಮಗಳಿಗೆ ನಿರ್ಬಂಧ ಹೇರುವಂತೆ ಕೋರಿ ಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯಕ್ಕೆ ಕುಂದಾಪುರ ಮೂಲದ ಗಣೇಶ್ ಶೆಟ್ಟಿ ಎಂಬವರು ದಾವೆ ಹೂಡಿದ್ದಾರೆ.

ಕುಂದಾಪುರವು ಉಡುಪಿ ಜಿಲ್ಲೆಯ ಪ್ರಮುಖ ಪಟ್ಟಣವಾಗಿದ್ದು, ಕದಂಬರು, ಚಾಲುಕ್ಯ, ಹೊಯ್ಸಳ ಹಾಗೂ ವಿಜಯನಗರ ಅರಸರು ಈ ಪಟ್ಟಣದ ಸಾಂಸ್ಕೃತಿಕ ಮತ್ತು ಆರ್ಥಿಕ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಎಂದು ದಾವೆಯಲ್ಲಿ ವಿವರಿಸಲಾಗಿದೆ. ವಂಚನೆ ಆರೋಪದಲ್ಲಿ ಚೈತ್ರಾ ಹಾಗೂ ಇತರೆ ಆರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಚೈತ್ರ ಕೂಡಾ ಕುಂದಾಪುರದ ಮೂಲದವರಾಗಿದ್ದು, ಆದರೆ ಈ ವಂಚನೆ ಪ್ರಕರಣಕ್ಕೆ ಮಾಧ್ಯಮಗಳು ಚೈತ್ರಾ ಹೆಸರು ಬಳಸುವಾಗ ಕುಂದಾಪುರ ಎಂಬುದಾಗಿ ಉಲ್ಲೇಖಿಸುತ್ತಿವೆ. ಇದರಿಂದ ಕುಂದಾಪುರ ಪಟ್ಟಣದ ಹೆಸರು ಮತ್ತು ಘನತೆಗೆ ಧಕ್ಕೆಯಾಗುತ್ತಿದೆ. ಚೈತ್ರಾ ಹೆಸರಿನ ಮುಂದೆ ಕುಂದಾಪುರ ಬಳಸದಂತೆ ಮಾಧ್ಯಮ ಮತ್ತು ಸಾಮಾಜಿಕ ಮಾಧ್ಯಮಗಳಿಗೆ ನಿರ್ಬಂಧ ಮಾಡಬೇಕು. ಈಗಾಗಲೇ ಕುಂದಾಪುರ ಹೆಸರು ಉಲ್ಲೇಖಿಸಿ ಪ್ರಸಾರ ಮಾಡಿರುವ ಸುದ್ದಿ, ವೀಡಿಯೋ, ಪೋಸ್ಟ್, ಲಿಂಕ್‌ಗಳನ್ನು ಶಾಶ್ವತವಾಗಿ ತೆಗೆದುಹಾಕುವಂತೆ ಸೂಚಿಸಬೇಕು ಎಂದು ಕೋರ್ಟ್ ಮೊರೆ ಹೋಗಲಾಗಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.

Also Read  ಅತಿಯಾದ ಮೊಬೈಲ್ ಬಳಕೆ ಒತ್ತಡಗಳಿಗೆ ಕಾರಣ - ಹಿರಿಯ ಸಿವಿಲ್ ನ್ಯಾಯಾಧೀಶೆ ಶೋಭಾ ಬಿಜಿ

error: Content is protected !!
Scroll to Top