(ನ್ಯೂಸ್ ಕಡಬ)newskadaba.com ಬೆಂಗಳೂರು, ಸೆ.23. ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಭ್ರಷ್ಟಾಚಾರ ನಡೆದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಪುತ್ರ ಯತೀಂದ್ರ ವಿರುದ್ಧ ದೂರು ದಾಖಲಾಗಿದೆ ಎನ್ನಲಾಗಿದೆ.
ಕರ್ನಾಟಕ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತರಿಗೆ ಬಿಜೆಪಿ ದೂರು ಸಲ್ಲಿಸಿದ್ದು, ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸಲು ನಿರ್ದೇಶಿಸುವಂತೆ ಆಗ್ರಹಿಸಿದೆ ಎಂದು ತಿಳಿದುಬಂದಿದೆ.
ಮತದಾರರಿಗೆ ಆಸೆ, ಆಮಿಷ ಒಡ್ಡಬಾರದೆಂದು ಕಾನೂನಿದ್ದು, ಬಟ್ಟೆ ತೊಳೆಯುವ ಮತ್ತು ಇಸ್ತ್ರಿ ಹಾಕುವ ಮಡಿವಾಳ ಸಮುದಾಯಕ್ಕೆ ಇಸ್ತ್ರಿ ಪೆಟ್ಟಿಗೆ ಮತ್ತು ಮನೆ ಮನೆಗೆ ಕುಕ್ಕರ್, ಹಣ ಹಂಚಿದ ಬಗ್ಗೆ ಸಿದ್ದರಾಮಯ್ಯನವರ ಪುತ್ರ ಯತೀಂದ್ರ ಭಾಷಣದಲ್ಲಿ ತಿಳಿಸಿದ್ದಾರೆಂದು ವರದಿಯಾಗಿದೆ.