ಕಾರು ಢಿಕ್ಕಿ- ರಿಕ್ಷಾ ಚಾಲಕ ಮೃತ್ಯು..!



(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 23. ಕಾರು ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಚಾಲಕ ಮೃತಪಟ್ಟ ಘಟನೆ ತಾಲೂಕಿನ ವಗ್ಗ ಸಮೀಪದ ಕಾಡಬೆಟ್ಟು ಕ್ರಾಸ್ ಎಂಬಲ್ಲಿ ನಡೆದಿದೆ.








ಮೃತರನ್ನು ಕೆಂಪುಗುಡ್ಡೆ ನಿವಾಸಿ ವಿನಾಯಕ ಪೈ ಎಂದು ಗುರುತಿಸಲಾಗಿದೆ. ವಿನಾಯಕ ಪೈ ಅವರು ಮನೆಯಲ್ಲಿ ಕೆಲಸ ಮಾಡುವ ಕೂಲಿ ಕಾರ್ಮಿಕರಿಗೆ ಬೆಳಿಗ್ಗಿನ ಉಪಹಾರ ತರಲೆಂದು ವಗ್ಗದ ಹೊಟೇಲ್ ಒಂದಕ್ಕೆ ಹೋಗುತ್ತಿದ್ದ ವೇಳೆ ಬೆಳ್ತಂಗಡಿ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ವ್ಯಾಗನಾರ್ ಕಾರು ರಿಕ್ಷಾಕ್ಕೆ ಡಿಕ್ಕಿಯಾಗಿದೆ. ಪರಿಣಾಮ ಗಂಭೀರ ಗಾಯಗೊಂಡ ವಿನಾಯಕ ಪೈ ಅವರನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಆಸ್ಪತ್ರೆ ಸಾಗಿಸುವ ದಾರಿ ಮಧ್ಯೆ ಅವರು ಅಸುನೀಗಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೋಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.






error: Content is protected !!
Scroll to Top