ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಸೆ. 25 ರಂದು ಮಂಗಳೂರು ದಸರಾ ಕ್ರೀಡಾಕೂಟ – News Kadaba

ಸೆ. 25 ರಂದು ಮಂಗಳೂರು ದಸರಾ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 24. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಮಂಗಳೂರು ಮಹಾನಗರ ಪಾಲಿಕೆಯ ಸಹಯೋಗದಲ್ಲಿ ಮಂಗಳೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ನಾಳೆ (ಸೆ.25) ಬೆಳಿಗ್ಗೆ 9 ಗಂಟೆಗೆ ನಗರದ ಮಂಗಳ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಫರೀದ್ ಅವರು ಘನ ಉಪಸ್ಥಿತಿ ವಹಿಸುವರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಕಾರ್ಯಕ್ರಮ ಉದ್ಘಾಟಿಸುವರು. ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರಾದ ಬಿ. ನಾಗೇಂದ್ರ ಗೌರವ ಉಪಸ್ಥಿತಿ ವಹಿಸುವರು. ಶಾಸಕರಾದ ಡಿ. ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಸಂಸದರಾದ ನಳಿನ್ ಕುಮಾರ್ ಕಟೀಲ್, ರಾಜ್ಯಸಭಾ ಸಂಸದರಾದ ವೀರೇಂದ್ರ ಹೆಗ್ಗಡೆ, ಶಾಸಕರಾದ ಡಾ. ಭರತ್ ಶೆಟ್ಟಿ ವೈ, ವಿಧಾನ ಪರಿಷತ್ ಶಾಸಕರಾದ ಕೋಟ ಶ್ರೀನಿವಾಸ ಪೂಜಾರಿ, ಬಿ.ಎಂ. ಫಾರೂಕ್, ಕೆ. ಹರೀಶ್ ಕುಮಾರ್, ಎಸ್.ಎಲ್. ಭೋಜೇಗೌಡ, ಪ್ರತಾಪ ಸಿಂಹ ನಾಯಕ್, ಕೆ. ಮಂಜುನಾಥ ಭಂಡಾರಿ, ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಸುಧೀರ್ ಶೆಟ್ಟಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

 

Scroll to Top