ಇಂದು (ಸೆ. 24) ಸುಳ್ಯ ತಾಲೂಕು ದಸರಾ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.comಸುಳ್ಯ, ಸೆ. 24. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸುಳ್ಯ ತಾಲೂಕು ಪಂಚಾಯತ್ ಹಾಗೂ ಪಂಜ ಗ್ರಾಮ ಪಂಚಾಯತ್ ನ ಸಹಯೋಗದಲ್ಲಿ ಸುಳ್ಯ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಇಂದು ಬೆಳಗ್ಗೆ 9 ಗಂಟೆಗೆ ಪಂಜದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕೋಟಿ ಚೆನ್ನಯ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.


ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಫರೀದ್ ಅವರು ಘನ ಉಪಸ್ಥಿತಿ ವಹಿಸುವರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಕಾರ್ಯಕ್ರಮ ಉದ್ಘಾಟಿಸುವರು. ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರಾದ ಬಿ. ನಾಗೇಂದ್ರ ಗೌರವ ಉಪಸ್ಥಿತಿಯನ್ನು ವಹಿಸುವರು. ಶಾಸಕರಾದ ಭಾಗೀರಥಿ ಮುರುಳ್ಯ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಸಂಸದರಾದ ನಳಿನ್ ಕುಮಾರ್ ಕಟೀಲ್, ರಾಜ್ಯಸಭಾ ಸಂಸದರಾದ ವೀರೇಂದ್ರ ಹೆಗ್ಗಡೆ, ವಿಧಾನ ಪರಿಷತ್ ಶಾಸಕರಾದ ಕೋಟ ಶ್ರೀನಿವಾಸ ಪೂಜಾರಿ, ಬಿ.ಎಂ. ಫಾರೂಕ್, ಕೆ. ಹರೀಶ್ ಕುಮಾರ್, ಎಸ್.ಎಲ್. ಭೋಜೇಗೌಡ, ಪ್ರತಾಪ ಸಿಂಹ ನಾಯಕ್, ಕೆ. ಮಂಜುನಾಥ ಭಂಡಾರಿ ಹಾಗೂ ಪಂಜ ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಿಜಯಲಕ್ಷ್ಮೀ ಅವರು ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

Also Read  ಆಲಂಕಾರು: ಕುಳಿತ ಸ್ಥಿತಿಯಲ್ಲೇ ಭದ್ರತಾ ಸಿಬ್ಬಂದಿ ಮೃತ್ಯು...!!

error: Content is protected !!
Scroll to Top