(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 24. ಪ್ರತಿಯೊಂದು ಶಾಲೆಗಳಲ್ಲೂ ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳು ಜಾರಿಗೊಂಡರೆ ವಿದ್ಯಾರ್ಥಿಗಳು ಜಾಗೃತರಾಗಲು ಅನುಕೂಲವಾಗುತ್ತದೆ ಎಂದು ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಕೆ. ಅವರು ಅಭಿಪ್ರಾಯಪಟ್ಟರು. ಅವರು ನಗರದ ಲಾಲ್‍ಬಾಗ್ ನ ಸ್ಕೌಟ್ಸ್ ಮತ್ತು ಗೈಡ್ಸ್ ಭವನದಲ್ಲಿ ಹಮ್ಮಿಕೊಂಡ ಜಿಲ್ಲೆಯ ಶಿಕ್ಷಣ ಇಲಾಖೆ ಅಧಿಕಾರಿಗಳಿಗಾಗಿ ಹಮ್ಮಿಕೊಂಡಿದ್ದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಹಮ್ಮಿಕೊಳ್ಳುವ ಚಟುವಟಿಕೆಗಳು ಮಕ್ಕಳಲ್ಲಿ ಸಾಮಾಜಿಕ ಕಳಕಳಿ, ಶಿಸ್ತು, ಸಂಯಮ, ಕರ್ತವ್ಯ ಮತ್ತು ಜವಾಬ್ದಾರಿಯನ್ನು ತಿಳಿಸಿಕೊಡುತ್ತವೆ, ಅದು ಮಕ್ಕಳ ಮುಂದಿನ ಭವಿಷ್ಯಕ್ಕೆ ಸಹಕಾರಿಯಾಗಲಿದೆ, ಪಠ್ಯಪುಸ್ತಕಗಳ ಜ್ಞಾನದೊಂದಿಗೆ ಲೋಕ ಜ್ಞಾನ ಹಾಗೂ ಪ್ರಾಯೋಗಿಕ ಜ್ಞಾನವು ಮಕ್ಕಳಲ್ಲಿ ಸಾಮಾಜಿಕ ಜವಾಬ್ದಾರಿಯ ಅರಿವು ಮೂಡಿಸಲು ನೆರವು ನೀಡುತ್ತದೆ ಎಂದರು. ಸ್ಕೌಟ್ಸ್ ಮತ್ತು ಗೈಡ್ಸ್ ನ ರಾಜ್ಯ ಮುಖ್ಯ ಆಯುಕ್ತರಾದ ಪಿ.ಜಿ.ಆರ್. ಸಿಂಧ್ಯಾ ಅಧ್ಯಕ್ಷತೆ ವಹಿಸಿದ್ದರು.
ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ದಯಾನಂದ ರಾಮಚಂದ್ರ ನಾಯ್ಕ್, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಉಪನಿರ್ದೇಶಕರಾದ ರಾಜಲಕ್ಷ್ಮೀ, ಮಂಗಳೂರು ದಕ್ಷಿಣ ಕ್ಷೇತ್ರ ಶಿಕ್ಷಣಾಧಿಕಾರಿ ಈಶ್ವರ, ಉಪಯೋಜನಾ ಸಮನ್ವಯಾಧಿಕಾರಿ ಡಾ. ಸುಮಂಗಲ ಎಸ್ ನಾಯಕ್, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಭುವನೇಶ್ ಜೆ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ವಯಸ್ಕ ಸಂಪನ್ಮೂಲ ಆಯುಕ್ತ ಡಾ. ಸುಕುಮಾರ್ ಕೆ, ರಾಜ್ಯ ಸ್ಕೌಟ್ ಸಂಘಟನಾ ಆಯುಕ್ತ ಎಂ. ಪ್ರಭಾಕರ ಭಟ್, ಜಿಲ್ಲಾ ಸ್ಕೌಟ್ ಆಯುಕ್ತ ರಾಮಶೇಷ ಶೆಟ್ಟಿ, ಜಿಲ್ಲಾ ಸಂಸ್ಥೆಯ ಉಪಾಧ್ಯಕ್ಷ ವಸಂತ ರಾವ್, ವಿಮಲಾ ರಂಗಯ್ಯ, ಜಿಲ್ಲಾ ಕಾರ್ಯದರ್ಶಿ ಎಂ.ಜಿ. ಕಜೆ, ಜಿಲ್ಲಾ ಪ್ರಭಾರ ಗೈಡ್ ಆಯುಕ್ತೆ ಜಯವಂತಿ ಸೋನ್ಸ್, ಜಿಲ್ಲಾ ಕೋಶಾಧಿಕಾರಿ ಅನಿಲ್ ಕುಮಾರ್, ತರಬೇತುದಾರ ಗುರುಮೂರ್ತಿ ನಾಯ್ಕಾಪು, ಜಿಲ್ಲಾ ಸ್ಕೌಟ್ ತರಬೇತಿ ಆಯುಕ್ತ ಪ್ರತೀಮ್ ಕುಮಾರ್, ಜಿಲ್ಲಾ ಸಂಘಟನಾ ಆಯುಕ್ತ ಶಾಂತರಾಮ ಪ್ರಭು, ರಾಜ್ಯ ಸಹಾಯಕ ಸಂಘಟನಾ ಆಯುಕ್ತ ಭರತ್ ರಾಜ್ ಕೆ, ಬಂಟ್ವಾಳ ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಬಿ.ಎಂ. ತುಂಬೆ, ಶುಭ ವಿಶ್ವನಾಥ್, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಜಿಲ್ಲಾ ಡಯಟ್ ಹಿರಿಯ ಉಪನ್ಯಾಸಕರುಗಳು, ಜಿಲ್ಲಾ ಹಾಗೂ ತಾಲೂಕು ಸ್ಕೌಟ್ ಗೈಡ್ ನೋಡಲ್ ಅಧಿಕಾರಿಗಳು, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರು, ತಾಲೂಕು ಸ್ಕೌಟ್ ಗೈಡ್ ನೋಡಲ್ ಅಧಿಕಾರಿಗಳು, ಶಿಕ್ಷಣ ಸಂಯೋಜಕರು, ಬಿ ಆರ್ ಪಿ, ಸಿ ಆರ್ ಪಿ, ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿಗಳು ಹಾಗೂ ಸ್ಥಳೀಯ ಸಂಸ್ಥೆಯ ಪದಾಧಿಕಾರಿಗಳು ಕಾರ್ಯಾಗಾರದಲ್ಲಿ ಭಾಗವಹಿಸಿದರು.