ಕಾರು ಢಿಕ್ಕಿ: ಐದರ ಬಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 24. ಕಾರು ಢಿಕ್ಕಿಯಾಗಿ ಐದು ವರ್ಷದ ಬಾಲಕನೋರ್ವ ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಕೆಯ್ಯೂರಿನಲ್ಲಿ ನಡೆದಿದೆ.

ಮೃತ ಬಾಲಕನನ್ನು ಕೆಯ್ಯೂರು ಗ್ರಾಮದ ನಿವಾಸಿ ಹಾರಿಸ್ ದಾರಿಮಿ ಎಂಬವರ ಪುತ್ರ, ಯುಕೆಜಿ ವಿದ್ಯಾರ್ಥಿ ಮಹಮ್ಮದ್ ಆದಿಲ್ (5) ಎಂದು ಗುರುತಿಸಲಾಗಿದೆ. ಮಹಮ್ಮದ್ ಆದಿಲ್ ಶನಿವಾರದಂದು ಮಧ್ಯಾಹ್ನ ನಡೆದುಕೊಂಡು ಹೋಗುತ್ತಿದ್ದ ವೇಳೆ ಪುತ್ತೂರು ಕಡೆಗೆ ಹೋಗುತ್ತಿದ್ದ ಕಾರು ಬಾಲಕನಿಗೆ ಢಿಕ್ಕಿಯಾಗಿದೆ. ಗಂಭೀರ ಗಾಯಗೊಂಡ ಬಾಲಕನನ್ನು ಪುತ್ತೂರಿನ ಆಸ್ಪತ್ರೆಗೆ ಸೇರಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬಾಲಕ ರಾತ್ರಿ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  SSLC ಫಲಿತಾಂಶ ಪ್ರಕಟ !!! ➤ ಚಿತ್ರದುರ್ಗ ಜಿಲ್ಲೆ ಪ್ರಥಮ, ದಕ್ಷಿಣ ಕನ್ನಡಕ್ಕೆ 19ನೇ ಸ್ಥಾನ

error: Content is protected !!
Scroll to Top