ಅಕ್ರಮ ಮರಳು ತೆಗೆಯುತ್ತಿದ್ದ ಸ್ಥಳಕ್ಕೆ ಪೊಲೀಸ್ ದಾಳಿ – ಎರಡು ಟಿಪ್ಪರ್ ಸಹಿತ 15 ದೋಣಿ ವಶಕ್ಕೆ

(ನ್ಯೂಸ್ ಕಡಬ) newskadaba.com ಬಜ್ಪೆ, ಸೆ. 24. ಮಂಗಳೂರು ತಾಲೂಕಿನ ಅಡ್ಡೂರು ಗ್ರಾಮದ ನಂದ್ಯಾ ಎಂಬಲ್ಲಿ ಗುರುಪುರ (ಪಲ್ಗುಣಿ) ನದಿಯಿಂದ ಅಕ್ರಮವಾಗಿ ಮರಳು ತೆಗೆಯುತ್ತಿದ್ದ ಸ್ಥಳಕ್ಕೆ ದಾಳಿ ಮಾಡಿದ ಬಜ್ಪೆ ಪೊಲೀಸರು ಎರಡು ಟಿಪ್ಪರ್ ಲಾರಿಗಳ‌ ಸಹಿತ 15 ದೋಣಿಗಳನ್ನು ವಶಕ್ಕೆ ಪಡೆದಿರುವ ಕುರಿತು ವರದಿಯಾಗಿದೆ.

ಗುರುಪುರ ಫಲ್ಗುಣಿ ನದಿಯ ತಟದಲ್ಲಿ ಅಕ್ರಮವಾಗಿ ಮರಳು ಸಂಗ್ರಹಿಸಿ ಸಾಗಾಟ ಮಾಡುತ್ತಿರುವ ಕುರಿತು ಬಂದ ಖಚಿತ ಮಾಹಿತಿ ಮೇರೆಗೆ ಬಜ್ಪೆ ಪೊಲೀಸರು ಶನಿವಾರದಂದು ಬೆಳಗ್ಗೆ 4 ಗಂಟೆಯ ಸುಮಾರಿಗೆ ಕಾರ್ಯಾಚರಣೆ‌ ಕೈಗೊಂಡಿದ್ದಾರೆ. ಈ ವೇಳೆ ಆರೋಪಿಗಳು ಪರಾರಿಯಾಗಿದ್ದು, ಸ್ಥಳದಲ್ಲಿದ್ದ 5 ಲಕ್ಷ ರೂ. ಮೌಲ್ಯದ ಎರಡು ಟಿಪ್ಪರ್ ಲಾರಿಗಳು, ತಲಾ 50 ಸಾವಿರ ರೂ. ಮೌಲ್ಯದ 15 ದೋಣಿಗಳು ಹಾಗೂ ಅಕ್ರಮ ಮರಳುಗಾರಿಕೆಗೆ ಬಳಸುತ್ತಿದ್ದ ಸೊತ್ತುಗಳು ಸೇರಿ ಒಟ್ಟು 17.50 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಸಂಬಂಧ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಅರಂತೋಡು: ಬಿಯರ್ ತುಂಬಿದ್ದ ಲಾರಿ ಪಲ್ಟಿ ➤ ಚಾಲಕ ಅಪಾಯದಿಂದ ಪಾರು

error: Content is protected !!
Scroll to Top