ಬಾಲಕರ ವಿಭಾಗದ ಜಿಲ್ಲಾ ಮಟ್ಟದ ಕಬಡ್ಡಿ – ಕಡಬ ಸೈಂಟ್ ಆನ್ಸ್ ಪ್ರಾಥಮಿಕ ಶಾಲೆ ದ್ವಿತೀಯ

(ನ್ಯೂಸ್ ಕಡಬ) newskadaba.com ಕಡಬ, ಸೆ. 24. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಛೇರಿ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು, ಲಿಟಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆ ದರ್ಬೆ ಪುತ್ತೂರು ಇದರ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ 14ರ ವಯೋಮಾನದ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯ ಬಾಲಕರ ತಂಡವು ಭಾಗವಹಿಸಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ.

ಸಲೀತ್, ರಿಝ್ವಾನ್, ನಿರ್ಭಯ್ ಹಾಗೂ ಕೌಶಿಕ್ ಎಂಬ ವಿದ್ಯಾರ್ಥಿಗಳು ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲರಾದ ವಂ.ಫಾ.ಅಮಿತ್ ಪ್ರಕಾಶ್ ರೋಡ್ರಿಗಸ್ ಹಾಗೂ ಸಂಸ್ಥೆಯ ಸಂಚಾಲಕರಾದ ವಂ.ಫಾ.ಪೌಲ್ ಪ್ರಕಾಶ್ ಡಿ’ಸೋಜಾ ಇವರು ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಸಮದ್ ಎಎಸ್, ಅರುಣ್ ಕುಮಾರ್ ಹಾಗೂ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.

Also Read  ಸೋಮವಾರಪೇಟೆ ಬಳಿಯ ಕೋವರ್ ಕೊಲ್ಲಿ ಬಳಿ ತೊಫಾನ್ ಪಲ್ಟಿ ➤ ಬಾಲಕನ ದುರ್ಮರಣ

error: Content is protected !!
Scroll to Top