ಹೃದಯ ಸಂಬಂಧಿ ಕಾಯಿಲೆ- ನಾಲ್ಕರ ಪುಟ್ಟ ಬಾಲಕಿ ನಿಧನ..!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 24. ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ಪುಟ್ಟ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ಮಿತ್ತೂರಿನಲ್ಲಿ ಭಾನುವಾರದಂದು ನಡೆದಿದೆ.

ಮೃತ ಬಾಲಕಿಯನ್ನು ಮಿತ್ತೂರು ಸಮೀಪದ ಪಾಟ್ರಕೋಡಿ ನಿವಾಸಿ ಇಬ್ರಾಹಿಂ ಬಾತಿಷಾ ರವರ ಪುತ್ರಿ ಜಮೀಲಾ ಸನಿಕ (4) ಎಂದು ಗುರುತಿಸಲಾಗಿದೆ. ಪುತ್ತೂರಿನ ಮುರ ಎಂಬಲ್ಲಿರುವ ಅಲ್ ಬಿರ್ರ್ ಸ್ಕೂಲ್ ನ ಎಲ್.ಕೆ.ಜಿ. ವಿದ್ಯಾರ್ಥಿನಿಯಾಗಿದ್ದ ಈಕೆ ಅನಾರೋಗ್ಯದಿಂದ ಇದ್ದು ಬೆಂಗಳೂರಿನ ಹೃದಯಾಲಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ಭಾನುವಾರದಂದು ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾಳೆ ಎನ್ನಲಾಗಿದೆ.

Also Read  ಪಾಶ್ಚಾತ್ಯ ಆಹಾರಗಳಿಗೆ ಮಾರುಹೋಗುತ್ತಿದೆ ಭಾರತ ➤ಮರೆಯಾಗುತ್ತಿದೆ ಭಾರತೀಯ ಆಹಾರ ಪದ್ದತಿ

error: Content is protected !!
Scroll to Top