ಆಂಟಿ ಪಕ್ಕಕ್ಕೆ ಸರಿಯಿರಿ ಎಂದಿದ್ದಕ್ಕೆ ಚಪ್ಪಲಿಯಿಂದ ಹೊಡೆದ ಮಹಿಳೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 24. ಆಂಟಿ ಎಂದು ಕರೆದರು ಎಂಬ ಕಾರಣಕ್ಕೆ ಮಹಿಳೆಯೊಬ್ಬರು ವ್ಯಕ್ತಿಯೊಬ್ಬನ ಮೇಲೆ ಹಲ್ಲೆ ಮಾಡಿ ಅವಾಚ್ಯವಾಗಿ ನಿಂದಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಎಟಿಎಂ ಕೇಂದ್ರದ ಬಾಗಿಲ ಬಳಿ ನಿಂತಿದ್ದ ಮಹಿಳೆಯೋರ್ವರಿಗೆ ‘ಆಂಟಿ ಪಕ್ಕಕ್ಕೆ ಸರಿಯಿರಿ’ ಎಂದ ಸೆಕ್ಯೂರಿ ಗಾರ್ಡ್‌ಗೆ ಮಹಿಳೆಯೊಬ್ಬರು ಚಪ್ಪಲಿಯಿಂದ ಹೊಡೆದು ಅವಾಚ್ಯ ಶಬ್ಧಗಳಿಂದ ನಿಂದಿಸಿದ ಆರೋಪದಡಿ ಮಲ್ಲೇಶ್ವರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ರಾಜಾಜಿನಗರದ ಪೊಲೈಟ್‌ ಸೆಕ್ಯೂರಿ ಏಜೆನ್ಸಿಯ ಸೆಕ್ಯೂರಿ ಗಾರ್ಡ್‌ ಕೃಷ್ಣಯ್ಯ ಎಂಬವರು ನೀಡಿದ ದೂರಿನಂತೆ ಮಹಿಳೆಯ ವಿರುದ್ಧ ಎಫ್‌ಐಆರ್‌ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Scroll to Top