ಉದ್ಯಮಿಗೆ ವಂಚನೆ ಪ್ರಕರಣ – ಚೈತ್ರಾ ಸೇರಿ 7 ಆರೋಪಿಗಳಿಗೆ ನ್ಯಾಯಾಂಗ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 24. ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ ನಂಬಿಸಿ ಕೋಟ್ಯಂತರ ರೂ. ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಚೈತ್ರಾ ಸೇರಿ 7 ಮಂದಿ ಆರೋಪಿಗಳನ್ನು ಅ. 06ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಮೂರನೆ ಎಸಿಎಂಎಂ ನ್ಯಾಯಾಲಯವು ಶನಿವಾರದಂದು ಆದೇಶ ಹೊರಡಿಸಿದೆ.

ಚೈತ್ರಾ ಜೊತೆಗೆ ಉಳಿದ ಆರೋಪಿಗಳಾದ ಗಗನ್ ಕಡೂರ್, ಪ್ರಜ್ವಲ್, ರಮೇಶ್, ಚೆನ್ನಾನಾಯ್ಕ್, ಧನರಾಜ್ ಹಾಗೂ ಶ್ರೀಕಾಂತ್ ಸೇರಿ ಏಳು ಮಂದಿಯನ್ನೂ ನ್ಯಾಯಾಂಗ ಬಂಧನಕ್ಕೆ ಆದೇಶಿಸಲಾಗಿದ್ದು, ಇದರ ಬೆನ್ನಲ್ಲೇ ಚೈತ್ರಾ ಮತ್ತು ಅವರ ಸಂಗಡಿಗರನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕರೆದೊಯ್ಯಲಾಗಿದೆ.

Also Read  ಯುವತಿ ಮೇಲೆ ಅತ್ಯಾಚಾರ..!       ಸಂತ್ರಸ್ತೆ ಮತ್ತು ಆಕೆಯ ಸ್ನೇಹಿತನ ವಿರುದ್ಧ ಎಫ್ ಐಆರ್ ದಾಖಲು..!

error: Content is protected !!
Scroll to Top