ಗೋಮಾಂಸ ಸಾಗಾಟದ ವಾಹನಕ್ಕೆ ಬೆಂಕಿಯಿಟ್ಟು ಕಾರ್ಯಕರ್ತರಿಂದ ಆಕ್ರೋಶ

(ನ್ಯೂಸ್ ಕಡಬ) newskadaba.com ದೊಡ್ಡ ಬಳ್ಳಾಪುರ, ಸೆ. 24. ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದ ವಾಹನಗಳನ್ನು ತಡೆದ ಶ್ರೀರಾಮಸೇನೆ ಕಾರ್ಯಕರ್ತರು ವಾಹನಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ.

ವೀಕೆಂಡ್ ದಿನಗಳಲ್ಲಿ ಆಂಧ್ರದ ಹಿಂದೂಪುರದಿಂದ ಬೆಂಗಳೂರು ಸುತ್ತಮುತ್ತಲಿನ ಪ್ರದೇಶಗಳಿಗೆ ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುವುದು ಮಾಮೂಲು. ಇದನ್ನು ಬೆನ್ನಟ್ಟಿದ ಶ್ರೀರಾಮಸೇನೆ ಕಾರ್ಯಕರ್ತರು ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದ ಬಳಿ ಗೋಮಾಂಸ ಸಾಗಾಟದ ವಾಹನಗಳನ್ನ ತಡೆದು ಪರಿಶೀಲನೆ ನಡೆಸಿದಾಗ ಐದು ವಾಹನಗಳಲ್ಲಿ ಗೋಮಾಂಸ ಪತ್ತೆಯಾಗಿದೆ. ಇದರಿಂದ ಆಕ್ರೋಶಗೊಂಡ ಕಾರ್ಯಕರ್ತರು ಕಾರಿಗೆ ಬೆಂಕಿ ಹಚ್ಚಿ, ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಬರುವಂತೆಯೂ ಪ್ರತಿಭಟನೆ ನಡೆಸಿದರು. ಸುದ್ದಿ ತಿಳಿದು ಘಟನಾ ಸ್ಥಳಕ್ಕೆ ಬಂದ ದೊಡ್ಡಬಳ್ಳಾಪುರ ಠಾಣಾ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದ್ದಾರೆ.

Also Read  ಮಂಗಳೂರು: ಶ್ರೀನಿವಾಸ ವಿಶ್ವ ವಿದ್ಯಾನಿಲಯದ ಬಿ. ಕಾಂ. ಪದವಿ ಕೋರ್ಸಿನ ವಿದ್ಯಾರ್ಥಿಗಳ ರ್ಯಾಂಕ್ ಪ್ರಕಟ

error: Content is protected !!
Scroll to Top