(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.08. ಸುಪ್ರೀಂ ಕೋರ್ಟ್ ಆದೇಶದಂತೆ ಕನಿಷ್ಠ ವೇತನ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್ ಕಾರ್ಯಕರ್ತೆಯರು ಫ್ರೀಡಂ ಪಾರ್ಕ್‌ನಲ್ಲಿ ಮಂಗಳವಾರದಿಂದ ಆರಂಭಿಸಿರುವ ಅಹೋರಾತ್ರಿ ಧರಣಿ ಮೂರನೇ ದಿನಕ್ಕೆ ಕಾಲಿಟ್ಟಿದೆ.
ರಾಜ್ಯದ ಮೂಲೆ ಮೂಲೆಗಳಿಂದ ಆಗಮಿಸಿರುವ ಸಾವಿರಾರು ಕಾರ್ಯಕರ್ತೆಯರು ವಿಧಾನ ಸೌಧಕ್ಕೆ ಮುತ್ತಿಗೆ ಹಾಕಲು ಮುಂದಾಗಿದ್ದು ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಬ್ಯಾರಿಕೇಡ್‌ಗಳನ್ನು ತಳ್ಳಿ ಮುಂದಕ್ಕೆ ಸಾಗಲು ಯತ್ನಿಸಿದ ಪ್ರತಿಭಟನಾ ನಿರತರನ್ನು ತಡೆಯಲು ಮಹಿಳಾ ಪೊಲೀಸ್ ಸಿಬಂದಿಗಳು ಹರ ಸಾಹಸ ಪಡುತ್ತಿದ್ದಾರೆ. ಅಧಿವೇಶನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದ ಗಮನ ಸೆಳೆಯಲು ಬಿಸಿಯೂಟ ತಯಾರಕರನ್ನು ಸಂಘಟಿತ ಕಾರ್ಮಿಕರಂತೆ ಪರಿಗಣಿಸಿ ಕನಿಷ್ಠ ವೇತನ 18 ಸಾವಿರ ರೂ.ಗಳನ್ನು ನೀಡಬೇಕು ಎಂದು ಪ್ರತಿಭಟನೆ ನಡೆಸುತ್ತಿದ್ದಾರೆ.