ಸುಧಾಮೂರ್ತಿ ಹೆಸರಿನಲ್ಲಿ ವಂಚನೆ – ಇಬ್ಬರ ವಿರುದ್ದ ದೂರು ದಾಖಲು

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 24. ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಡಾ.ಸುಧಾಮೂರ್ತಿ ಅವರ ಹೆಸರನ್ನು ಬಳಸಿ, ವಂಚನೆ ಮಾಡಿದ ಆರೋಪದಲ್ಲಿ ಇಬ್ಬರ ವಿರುದ್ಧ ದೂರು ದಾಖಲಾಗಿದೆ.

ಈ ಸಂಬಂಧ ಸುಧಾಮೂರ್ತಿ ಅವರ ಆಪ್ತ ಸಹಾಯಕಿ ಮಮತಾ ಸಂಜಯ್ ಎಂಬವರು ಜಯನಗರ ಪೊಲೀಸ್ ಠಾಣೆಗೆ ದೂರು ನೀಡಿದ ದೂರಿನಂತೆ ಶೃತಿ ಹಾಗೂ ಲಾವಣ್ಯ ಎಂಬವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ ಎಂದು ವರದಿಯಾಗಿದೆ. ದೂರಿನ ಪ್ರಕಾರ, ಕನ್ನಡ ಕೂಟ ಆಫ್ ನಾರ್ಥ್ ಕ್ಯಾಲಿಪೋರ್ನಿಯಾ ಎಂಬ ಸಂಘಟನೆಯಿಂದ 50ನೇ ವರ್ಷದ ಕಾರ್ಯಕ್ರಮಕ್ಕೆ ಸುಧಾಮೂರ್ತಿಗೆ ಆಹ್ವಾನ ನೀಡಲಾಗಿತ್ತು. ಆದರೆ ಅವರು ಇ-ಮೇಲ್ ಮೂಲಕ ಅಮೇರಿಕಾದಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಭಾಗವಹಿಸುವುದಕ್ಕೆ ಆಗಲ್ಲ ಅಂತ ತಿಳಿಸಿದ್ದರು. ಇದರ ನಡುವೆಯೂ ಅವರ ಪೋಟೋಗಳನ್ನು ಬಳಸಿಕೊಂಡು ಜಾಹೀರಾತುಗಳನ್ನು ನೀಡಲಾಗಿತ್ತಲ್ಲದೇ ಅಮೇರಿಕಾದಲ್ಲಿ ಮೀಟ್ ಆಂಡ್ ಗ್ರೀಟ್ ವಿತ್ ಡಾ.ಸುಧಾಮೂರ್ತಿ ಕಾರ್ಯಕ್ರಮ ಆಯೋಜಿಸಲಾಗಿದೆ ಅಂತ ಟಿಕೆಟ್ ಕೂಡ ಮಾರಾಟ ಮಾಡಲಾಗಿತ್ತು. ಪ್ರತಿ ಟಿಕೆಟ್ ಗೆ 40 ಡಾಲ್ ಪಡೆದಿರುವ ಆರೋಪ ಕೂಡಾ ಕೇಳಿ ಬಂದಿದೆ. ಈ ಹಿನ್ನಲೆ ಶೃತಿ ಹಾಗೂ ಲಾವಣ್ಯ ಎಂಬವರ ವಿರುದ್ಧ ದೂರು ದಾಖಲಾಗಿದೆ.

Also Read  ಹಿರಿಯ ಪತ್ರಕರ್ತ ಕೆ.ಸತ್ಯಸಾರಾಯಣ ನಿಧನ

error: Content is protected !!
Scroll to Top