ಕಾವೇರಿ ಕಿಚ್ಚು- ಸೆ. 29ರಂದು ಬೆಂಗಳೂರು ಬಂದ್; ಹೋಟೆಲ್ ಮಾಲೀಕರ ಸಂಘ ಬೆಂಬಲ- ಎಲ್ಲಾ ಹೋಟೆಲ್ ಗಳು ಬಂದ್

(ನ್ಯೂಸ್ ಕಡಬ) newskadba.com ಬೆಂಗಳೂರು, ಸೆ. 24. ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ಖಂಡಿಸಿ ಮಂಗಳವಾರದಂದು ನಡೆಯುವ ಬೆಂಗಳೂರು ಬಂದ್ ಗೆ ಹಲವು ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದ್ದು, ಅದೇ ರೀತಿ ಹೋಟೆಲ್ ಮಾಲೀಕರ ಸಂಘವೂ ಕೂಡಾ ಬೆಂಗಳೂರು ಬಂದ್ ಗೆ ಬೆಂಬಲ ನೀಡಿವೆ.

ಅದೇ ರೀತಿ ಸಾರಿಗೆ ಸಂಘಟನೆಗಳು ಕೂಡಾ ಬೆಂಬಲ ನೀಡಿವೆ. ನೆಲ, ಜಲ ಹಾಗೂ ಭಾಷೆ ವಿಚಾರದಲ್ಲಿ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ಖಾಸಗಿ ಸಾರಿಗೆ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ನಟರಾಜ್ ಶರ್ಮಾ ಹೇಳಿದ್ದಾರೆ.ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರವಾಗಿ ಕಳೆದ ಹಲವು ತಿಂಗಳಿನಿಂದ ಹೋರಾಟ ನಡೆಯುತ್ತಿದ್ದು ಇದೀಗ ಕನ್ನಡಪರ ಹಿರಿಯ ಹೋರಾಟಗಾರರಾದ ವಾಟಾಳ್ ನಾಗರಾಜ್ ಸೆಪ್ಟೆಂಬರ್ 29ರಂದು ಶುಕ್ರವಾರ ಅಖಂಡ ಕರ್ನಾಟಕ ಬಂದ್ ಮಾಡುವ ಕುರಿತು ನಾಳಿನ ಸಭೆಯಲ್ಲಿ ತೀರ್ಮಾನಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

Also Read  ಕಾಮನ್ವೆಲ್ತ್ ವೇಟ್ಲಿಫ್ಟಿಂಗ್ನಲ್ಲಿ ಹೊಸ ದಾಖಲೆ ಬರೆದ ಅಜಯ್ ಸಿಂಗ್

ಹಿರಿಯ ಹೋರಾಟಗಾರ ವಾಟಾಳ್ ನಾಗರಾಜ್ ಸುದ್ದಿಗಾರರೊಂದಿಗೆ ಮಾತನಾಡಿ, ಮಂಗಳೂರಿಂದ ಕೋಲಾರದವರೆಗೆ ಮತ್ತು ಉತ್ತರ ಕರ್ನಾಟಕದಲ್ಲಿ ಬೆಳಗಾವಿ ವಿಜಾಪುರ ಸೇರಿದಂತೆ ಇಡೀ ರಾಜ್ಯದ ರೈತರು ಈ ಬಂದ್ ಗೆ ಸೇರುತ್ತಿದ್ದಾರೆ. 29 ರಂದು ಬೆಳಿಗ್ಗೆ 6 ರಿಂದ ಸಂಜೆ 6ರವರೆಗೆ ಬಂದ್ ಮಾಡುವುದಾಗಿ ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಸ್ಪಷ್ಟಪಡಿಸಿದರು.

error: Content is protected !!
Scroll to Top