ಮಠ, ದೇಗುಲಗಳನ್ನು ನಿಯಂತ್ರಿಸುವ ಯಾವುದೇ ಉದ್ದೇಶ ಸರಕಾರಕ್ಕಿಲ್ಲ ► ವಿಧಾನ ಪರಿಷತ್ ಕಲಾಪದಲ್ಲಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.08. ‘ಮಠ ಹಾಗೂ ಮಠಗಳ ವಶದಲ್ಲಿರುವ ಹಿಂದೂ ದೇವಾಲಯಗಳನ್ನು ನಿಯಂತ್ರಿಸುವ ಯಾವುದೇ ಉದ್ದೇಶ ರಾಜ್ಯ ಸರಕಾರದ ಮುಂದೆ ಇಲ್ಲ’ ಎಂದು ಸಿಎಂ ಸಿದ್ದರಾಮಯ್ಯ ಅವರು ಗುರುವಾರ ವಿಧಾನ ಪರಿಷತ್‌ ಕಲಾಪದಲ್ಲಿ ಸ್ಪಷ್ಟಪಡಿಸಿದ್ದಾರೆ.

ಬಿಜೆಪಿ ಸದಸ್ಯರ ಪ್ರಶ್ನೆಗಳ ಸುರಿಮಳೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ, ಈ ಬಗ್ಗೆ ಜನರ ಅಭಿಪ್ರಾಯಗಳನ್ನು ಕೇಳಿದ್ದೇವು. ಈಗ ಆ ಪ್ರಸ್ತಾವನೆಯನ್ನು ಕೈಬಿಟ್ಟಿದ್ದೇವೆ. ಅಂತಹ ಯಾವುದೇ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ ಎಂದು ತಿಳಿಸಿದರು. ಸುತ್ತೋಲೆಯನ್ನು ವಾಪಾಸ್ ಪಡೆದಿದ್ದು, ಅದು ಪ್ರಕಟಣೆಯೇ ಹೊರತು ಸೂಚನೆ ಅಲ್ಲ, ಆದೇಶವೂ ಅಲ್ಲ. ಪ್ರಕಟಣೆಯನ್ನು ವಾಪಾಸ್ ತೆಗೆದುಕೊಳ್ಳುತ್ತೇವೆ ಎಂದರು.

Also Read  ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಸುಳ್ಯ ಕೋರ್ಟ್‌ನಿಂದ ವಾರಂಟ್ ➤ ಏನಿದು ಪ್ರಕರಣ ಗೊತ್ತೇ..?

error: Content is protected !!
Scroll to Top