ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಕಡಬ: ಚಲಿಸುತ್ತಿದ್ದ ಬಸ್ಸಿನಿಂದ ಹೊರಕ್ಕೆಸೆಯಲ್ಪಟ್ಟ ಇಬ್ಬರು; ಓರ್ವ ಮೃತ್ಯು, ಇನ್ನೋರ್ವ ಅಪಾಯದಿಂದ ಪಾರು – News Kadaba

ಕಡಬ: ಚಲಿಸುತ್ತಿದ್ದ ಬಸ್ಸಿನಿಂದ ಹೊರಕ್ಕೆಸೆಯಲ್ಪಟ್ಟ ಇಬ್ಬರು; ಓರ್ವ ಮೃತ್ಯು, ಇನ್ನೋರ್ವ ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಕಡಬ, ಸೆ.24. ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಕೆಳಕ್ಕೆ ಬಿದ್ದ ಪರಿಣಾಮ ವೃದ್ಧರೋರ್ವರು ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತಪಟ್ಟು, ಇನ್ನೋರ್ವ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾದ ಘಟನೆ ಭಾನುವಾರ ಸಂಜೆ ಕಡಬದ ಅಂಚೆ ಕಛೇರಿಯ ಬಳಿ ನಡೆದಿದೆ.

ಮೃತ ವ್ಯಕ್ತಿಯನ್ನು ಕಡಬ ತಾಲೂಕಿನ ಗ್ರಾಮದ ಕಳಾರ ಸಮೀಪದ ಕುದ್ಕೋಳಿ ನಿವಾಸಿ ಅಚ್ಚುತ್ತ ಗೌಡ (63) ಎಂದು ಗುರುತಿಸಲಾಗಿದೆ. ಮೃತರು ಭಾನುವಾರ ಸಂಜೆ ಕಡಬದಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಮನೆಗೆ ಹೊರಟಿದ್ದ ವೇಳೆ ತಾಲೂಕು ಕಛೇರಿಯ ಸಮೀಪದ ತಿರುವಿನಲ್ಲಿ ಅಚ್ಚುತ್ತ ಗೌಡ ಹಾಗೂ ಬಲ್ಯ ನಿವಾಸಿ ಚಂದ್ರಶೇಖರ ಎಂಬವರು ಬಸ್ಸಿನಿಂದ ರಸ್ತೆಗೆಸೆಯಲ್ಪಟ್ಟಿದ್ದಾರೆ. ಗಂಭೀರ ಗಾಯಗೊಂಡ ಅಚ್ಚುತ್ತ ಗೌಡರನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ 108 ಆಂಬ್ಯುಲೆನ್ಸ್ ಮೂಲಕ ಪುತ್ತೂರು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಹಾದಿ ಮಧ್ಯೆ ಮೃತಪಟ್ಟಿದ್ದಾರೆ. ಚಂದ್ರಶೇಖರ ಎಂಬವರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ. ಈ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Scroll to Top