ದಕ್ಷಿಣ ಕನ್ನಡ: ಜಿಲ್ಲಾ ಉಸ್ತುವಾರಿ ಸಚಿವರಿಂದ ಜನತಾ ದರ್ಶನಕ್ಕೆ ಚಾಲನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 25. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ನಗರದ ಕುದ್ಮಲ್ ರಂಗರಾವ್ ಪುರಭವನದಲ್ಲಿ ಜನತಾ ದರ್ಶನ ಕಾರ್ಯಕ್ರಮಕ್ಕೆ ಸೋಮವಾರದಂದು ಚಾಲನೆ ನೀಡಿದರು.

ಈ ಕಾರ್ಯಕ್ರಮದಲ್ಲಿ ಜನರ ಅಹವಾಲುಗಳನ್ನು ಆಲಿಸಿದ ಬಳಿಕ ಮಾತನಾಡಿದ ಸಚಿವ ಗುಂಡೂರಾವ್, ಮುಂದಿನ ದಿನಗಳಲ್ಲಿ ಜಿಲ್ಲೆಯ ತಾಲೂಕುಗಳಲ್ಲೂ ಜನತಾ ದರ್ಶನ ಆಯೋಜಿಸಲಾಗುವುದು ಎಂದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಡಿಸಿ ಮುಲ್ಲೈ ಮುಗಿಲನ್, ಜಿಪಂ ಸಿಇಒ ಡಾ.ಆನಂದ, ನಗರ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್, ಎಸ್ಪಿ ರಿಷ್ಯಂತ್ ಸೇರಿದಂತೆ ಅಧಿಕಾರಿಗಳು, ಜನಪ್ರತಿನಿಧಿಗಳು ವೇದಿಕೆಯಲ್ಲಿದ್ದರು.

Also Read  ಚಂದ್ರಯಾನ-3 ಯಶಸ್ಸಿಗೆ ಕುಕ್ಕೇ ಸುಬ್ರಹ್ಮಣ್ಯ ದೇವರಿಗೆ ಕುಕ್ಕೇ ಶ್ರೀ ಆಡಳಿತ ಮಂಡಳಿಯಿಂದ ವಿಶೇಷ ಸೇವೆ

error: Content is protected !!
Scroll to Top