ಮರಕ್ಕೆ ಕಾರು ಢಿಕ್ಕಿ- ಐವರು ದುರ್ಮರಣ

(ನ್ಯೂಸ್ ಕಡಬ) newskadaba.com ಮಧ್ಯಪ್ರದೇಶ, ಸೆ. 25. ಕಾರೊಂದು ಹೆದ್ದಾರಿ ಪಕ್ಕದಲ್ಲಿನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಐವರು ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ ಉಮಾರಿಯಾ ಜಿಲ್ಲೆಯ ಘುಂಗುಟಿ ಪೊಲೀಸ್ ಪೋಸ್ಟ್ ಪ್ರದೇಶದ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 43 ರ ಮಜ್ಗಾವಾ ಗ್ರಾಮದ ಬಳಿ ಮುಂಜಾನೆ 3 ಗಂಟೆಗೆ ಸಂಭವಿಸಿದೆ.

ಢಿಕ್ಕಿಯ ತೀವ್ರತೆಗೆ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟರೆ, ಇಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಮೃತರೆಲ್ಲರೂ 30 ರಿಂದ 35 ವರ್ಷದೊಳಗಿನವರು. ಅವರಲ್ಲಿ ಹೆಚ್ಚಿನವರು ಸರ್ಕಾರಿ ನೌಕರರಾಗಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಳ್ಳಲಾಗಿರುವುದಾಗಿ ತಿಳಿದುಬಂದಿದೆ.

Also Read  ಟರ್ಕಿ ಭೂಕಂಪ! ಕಾಣೆಯಾಗಿದ್ದ ಬೆಂಗಳೂರಿನ ಟೆಕ್ಕಿಯೋರ್ವನ ಶವ ಪತ್ತೆ

error: Content is protected !!
Scroll to Top