ಸೆ. 26ರಂದು ಬೆಂಗಳೂರು ಬಂದ್ – ನಾಳೆ ಯಾವ ಸೇವೆ ಇರುತ್ತೆ, ಏನಿರಲ್ಲ ಎಂಬುದನ್ನುತಿಳಿಯಿರಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 25. ಸುಪ್ರೀಂ ಕೋರ್ಟ್‌ ಆದೇಶದ ಪ್ರಕಾರ ತಮಿಳುನಾಡಿಗೆ ಪ್ರತಿದಿನ 5,000 ಕ್ಯೂಸೆಕ್ ನೀರು ಹರಿಸುವುದನ್ನು ಖಂಡಿಸಿ ರೈತ ಸಂಘಟನೆಗಳು, ಕನ್ನಡಪರ ಸಂಘಟನೆಗಳು ಸೇರಿದಂತೆ ಹಲವು ಸಂಘ ಸಂಸ್ಥೆಗಳು ಸೆಪ್ಟೆಂಬರ್‌ 26ರಂದು ಬೆಂಗಳೂರು ಬಂದ್‌ಗೆ ಕರೆ ನೀಡಿವೆ.

ಈ ಸಂಬಂಧ ಬೆಂಗಳೂರು ನಗರದಲ್ಲಿ ಸೆಪ್ಟೆಂಬರ್‌ 26ರಂದು ಯಾವ ಸೇವೆಗಳು ಲಭ್ಯವಿರುತ್ತದೆ ಹಾಗೂ ಯಾವುದು ಲಭ್ಯವಿರಲ್ಲ ಎಂದು ತಿಳಿಯುವುದು ಅತ್ಯಗತ್ಯವಾಗಿದೆ. ಈ ಬಂದ್ ಗೆ ರಾಜ್ಯಾದ್ಯಂತ 175 ಕ್ಕೂ ಹೆಚ್ಚು ಗುಂಪುಗಳು ಬೆಂಬಲ ನೀಡಿದ್ದು, ತಮಿಳುನಾಡಿಗೆ ನೀರು ಬಿಡುವುದನ್ನು ವಿರೋಧಿಸುವ ರೈತ ಸಂಘಟನೆಗಳನ್ನು ಬೆಂಬಲಿಸುವುದಾಗಿ ಹೇಳಿಕೊಂಡಿವೆ. ಕಾವೇರಿ ನೀರು ನಿಯಂತ್ರಣ ಸಮಿತಿಯ (ಸಿಡಬ್ಲ್ಯುಆರ್‌ಸಿ) ಶಿಫಾರಸಿನ ಮೇರೆಗೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯೂಎಂಎ) ಇತ್ತೀಚೆಗೆ ತಮಿಳುನಾಡಿಗೆ 5,000 ಕ್ಯೂಸೆಕ್ ನೀರನ್ನು ಹೆಚ್ಚುವರಿ 15 ದಿನಗಳವರೆಗೆ ಬಿಡುವಂತೆ ಕರ್ನಾಟಕಕ್ಕೆ ಸೂಚನೆ ನೀಡಿದೆ. ತಮಿಳುನಾಡಿಗೆ ನೀರು ಹಂಚಿಕೆಗೆ ಸಂಬಂಧಿಸಿದಂತೆ ಸೆಪ್ಟೆಂಬರ್ 26 ರಂದು ಕಾವೇರಿ ನೀರು ನಿಯಂತ್ರಣ ಸಮಿತಿಯ ನಂತರದ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಕರ್ನಾಟಕ ಸಚಿವ ಸಂಪುಟದ ಪ್ರಕಟಣೆ ತಿಳಿಸಿದೆ.

Also Read  ಕಾಲೇಜು ವಿದ್ಯಾರ್ಥಿಗಳಿಗೆ ಆಫರ್ ನೀಡಿದ ಕೆಎಸ್ಸಾರ್ಟಿಸಿ ➤ ಡಿ.31ರ ವರೆಗೆ ಹಳೆಯ ಬಸ್ ಪಾಸ್ ಇದ್ದರೆ ಉಚಿತ ಪ್ರಯಾಣ

ಬಂದ್ ಹಿನ್ನೆಲೆ ಲಭ್ಯವಿರದ ಸೇವೆಗಳು:- ಕ್ಯಾಬ್ ಸೇವೆಗಳು, ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ ಸೇವೆ ವ್ಯತ್ಯಯ, ವಿಮಾನ ನಿಲ್ದಾಣ ಟ್ಯಾಕ್ಸಿ ಸೇವೆಗಳು ಇರುವುದಿಲ್ಲ. ಆದರೆ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) ನಿಯಮಿತವಾದ ನಮ್ಮ ಮೆಟ್ರೋ ಸೇವೆಗಳನ್ನು ಒದಗಿಸುವುದನ್ನು ಮುಂದುವರಿಸುವುದಾಗಿ ತಿಳಿಸಿದೆ. ಶಾಲಾ-ಕಾಲೇಜುಗಳಿಗೆ ರಜೆ: ಕಾವೇರಿ ಪರ ಕಪ್ಪು ಪಟ್ಟಿ ಕಟ್ಟಿಕೊಂಡು ಬೆಂಬಲ ಸೂಚಿಸುವುದಾಗಿ ಖಾಸಗಿ ಶಾಲಾ-ಕಾಲೇಜುಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಹೇಳಿದ್ದು, ಹಲವು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿವೆ. ರೆಸ್ಟೋರೆಂಟ್‌ಗಳು.

Also Read  ಐತೂರು ಗ್ರಾಮ ಪಂಚಾಯತ್ ನಲ್ಲಿ ಸಮಾನ್ಯ ಸಭೆ

ಲಭ್ಯವಿರುವ ಸೇವೆಗಳು:- ಆಸ್ಪತ್ರೆ, ಮೆಡಿಕಲ್‌ ಶಾಪ್‌ಗಳು, ತರಕಾರಿ ಅಂಗಡಿಗಳು, ದಿನಸಿ ಅಂಗಡಿಗಳು, ಮೆಟ್ರೋ, ಅಂಚೆ ಕಚೇರಿ

error: Content is protected !!
Scroll to Top