ಸುಧಾಮೂರ್ತಿ ಹೆಸರಿನಲ್ಲಿ ವಂಚನೆ ಪ್ರಕರಣ- ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 25. ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾ ಮೂರ್ತಿ ಅವರ ಹೆಸರಿನಲ್ಲಿ ವಂಚಿಸಿದ ಆರೋಪದಡಿಯಲ್ಲಿ ಇಬ್ಬರು ಮಹಿಳೆಯರ ವಿರುದ್ಧ, ಸುಧಾ ಮೂರ್ತಿ ಅವರ ಕಾರ್ಯನಿರ್ವಾಹಕ ಸಹಾಯಕಿ ಮಮತಾ ಸಂಜಯ್ ಅವರು ಜಯನಗರ ಠಾಣೆಗೆ ನೀಡಿದ್ದ ದೂರನ್ನು ಆಧರಿಸಿ ಜಯನಗರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಆರೋಪಿಗಳನ್ನು ಲಾವಣ್ಯ ಮತ್ತು ಶೃತಿ ಎಂದು ಗುರುತಿಸಲಾಗಿದೆ. ಆರೋಪಿಗಳಿಬ್ಬರು ಸುಧಾಮೂರ್ತಿ ಅವರ ಹೆಸರು ಬಳಸಿಕೊಂಡು ಅಮೆರಿಕದಲ್ಲಿ ಹಣ ಸಂಗ್ರಹಿಸಿದ್ದಾರೆ ಎಂಬ ವಿಷಯ ತಿಳಿಯುತ್ತಿದ್ದಂತೆಯೇ ಅವರ ಆಪ್ತ ಸಹಾಯಕಿ ದೂರು ದಾಖಲಿಸಿದ್ದು, ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜಯನಗರ ಪೊಲೀಸರು ಐಪಿಸಿ ಸೆಕ್ಷನ್ 419 ಮತ್ತು 420 (ವಂಚನೆ), ಮತ್ತು ಐಟಿ ಕಾಯ್ದೆಯ 66 ಡಿ ಮತ್ತು 66 ಸಿ (ವ್ಯಕ್ತಿಯಿಂದ ವಂಚನೆ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Also Read  ನೇತ್ರಾವತಿ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ..!

error: Content is protected !!
Scroll to Top