ಲಾರಿ, ಕಾರು ಹಾಗೂ ಬೈಕ್ ನಡುವೆ ಸರಣಿ ಅಪಘಾತ- ಓರ್ವ ಗಂಭೀರ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 25. ಸರಣಿ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ನಗರದ ಬಿಕರ್ನಕಟ್ಟೆಯಲ್ಲಿ ಸೋಮವಾರದಂದು ಬೆಳಗ್ಗೆ ನಡೆದಿದೆ.

ಅಪಘಾತದಲ್ಲಿ 3 ಕಾರು, ಲಾರಿ ಹಾಗೂ ಬೈಕ್ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಬೈಕ್ ಸಂಪೂರ್ಣ ಅಪ್ಪಚ್ಚಿಯಾಗಿದೆ. ಕಾರಿನಲ್ಲಿ ಪ್ರಯಾಣಿಕರಿಗೂ ಸಣ್ಣ ಪುಟ್ಟ ಗಾಯಗಳಾಗಿವೆ. ಗಂಭೀರ ಗಾಯಗೊಂಡ ಬೈಕ್ ಸವಾರರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Also Read  ಮಟ್ಕಾ ದಂಧೆ- ಇಬ್ಬರ ಬಂಧನ

error: Content is protected !!
Scroll to Top