(ನ್ಯೂಸ್ ಕಡಬ) newskadaba.com ಉಳ್ಳಾಲ, ಸೆ. 25. ಟಯರ್ ಸ್ಫೋಟಗೊಂಡ ಪರಿಣಾಮ ಮೀನು ಸಾಗಾಟದ ಪಿಕಪ್ ವಾಹನ ಪಲ್ಟಿಯಾದ ಘಟನೆ ಉಳ್ಳಾಲದ ನೇತ್ರಾವತಿ ಸೇತುವೆಯಲ್ಲಿ ನಡೆದಿದೆ.
ಮಲ್ಪೆ ಬಂದರಿನಿಂದ ಉಳ್ಳಾಲ ಆಯಿಲ್ ಮಿಲ್ ಗೆ ಮೀನು ಸಾಗಾಟ ನಡೆಸುವ ವಾಹನ, ನೇತ್ರಾವತಿ ಸೇತುವೆ ತಲುಪುತ್ತಿದ್ದಂತೆ ಎದುರುಗಡೆಯ ಟಯರ್ ಸಿಡಿದಿದೆ. ಪರಿಣಾಮ ಒಂದು ದಿಕ್ಕಿನತ್ತ ತೆರಳಿದ ಪಿಕಪ್ ವಾಹನ ಸೇತುವೆಯ ತಡೆಗೋಡೆಗೆ ಢಿಕ್ಕಿ ಹೊಡೆದು ಪಲ್ಟಿಯಾಗಿದೆ. ಘಟನೆಯಲ್ಲಿ ಪಿಕಪ್ ಚಾಲಕ ಸಣ್ಣಪುಟ್ಟ ಗಾಯಗಳಿಂದ ಅಪಾಯದಿಂದ ಪಾರಾಗಿದ್ದಾರೆ. ವಾಹನದಲ್ಲಿದ್ದ ಮೀನು ರಸ್ತೆ ಪೂರ್ತಿ ಚೆಲ್ಲಿಹೋಗಿದ್ದವು.