ಮರ್ಧಾಳ ಮಸೀದಿಯ ಕಾಂಪೌಂಡ್ ಒಳಗೆ ನುಗ್ಗಿ ಘೋಷಣೆ ಕೂಗಿದ ಕಿಡಿಗೇಡಿಗಳು – ಆರೋಪಿಗಳ ಪತ್ತೆಗೆ ಬಲೆ ಬೀಸಿದ ಕಡಬ ಪೊಲೀಸರು

(ನ್ಯೂಸ್ ಕಡಬ) newskadaba.com ಕಡಬ, ಸೆ.25. ರಾತ್ರಿ ವೇಳೆಗೆ ಬೈಕ್ ನಲ್ಲಿ ಆಗಮಿಸಿದ ಕಿಡಿಗೇಡಿಗಳಿಬ್ಬರು ಮಸೀದಿಯ ಕಾಂಪೌಂಡ್ ಒಳಗೆ ನುಗ್ಗಿ ಜೈಶ್ರೀರಾಂ ಘೋಷಣೆ ಕೂಗಿರುವ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸೋಮವಾರ ರಾತ್ರಿ ಸುಮಾರು 11 ಗಂಟೆಯ ವೇಳೆಗೆ ಕಡಬ ಠಾಣಾ ವ್ಯಾಪ್ತಿಯ ಮರ್ಧಾಳ ಬದ್ರಿಯಾ ಜುಮಾ ಮಸೀದಿಯ ಕಾಂಪೌಂಡ್ ಒಳಗೆ ಬೈಕಿನಲ್ಲಿ ಬಂದ ಇಬ್ಬರು ಕಿಡಿಗೇಡಿಗಳು ಮಸೀದಿಯ ವರಾಂಡದಲ್ಲಿ ಬೈಕನ್ನು ಹಿಂತಿರುಗಿಸಿ ತೆರಳಿರುವುದು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಜೈಶ್ರೀರಾಂ ಘೋಷಣೆ ಕೂಗಿದ್ದಾರೆ ಎನ್ನಲಾಗಿದ್ದು, ಮಸೀದಿಯಲ್ಲಿದ್ದ ಧರ್ಮಗುರುಗಳನ್ನು ಕಂಡು ತಕ್ಷಣವೇ ಹಿಂತಿರುಗಿರುವುದಾಗಿ ಪೊಲೀಸರಿಗೆ ನೀಡಿದ ದೂರಿ‌ನಲ್ಲಿ ತಿಳಿಸಲಾಗಿದೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಕಡಬ ಸಬ್ ಇನ್ಸ್‌ಪೆಕ್ಟರ್ ಅಭಿನಂದನ್, ಉಪ್ಪಿನಂಗಡಿ ಠಾಣಾ ಸಬ್ ಇನ್ಸ್‌ಪೆಕ್ಟರ್ ಹಾಗೂ ಸಿಬ್ಬಂದಿಗಳು ಪರಿಸರದ ವಿವಿಧ ಸಿಸಿ ಕ್ಯಾಮರಾಗಳನ್ನು ಪರಿಶೀಲಿಸಿದ್ದು, ಎರಡು ತಂಡಗಳನ್ನು ರಚಿಸಿ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

Scroll to Top