ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಕಳ್ಳತನ ಪ್ರಕರಣ- ತಲೆಮರೆಸಿಕೊಂಡಿದ್ದ ಆರೋಪಿ ಅಂದರ್

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 25. ಕಳೆದ 9 ವರ್ಷಗಳಿಂದ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಕೋರ್ಟ್ ಆತನಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.

ಬಂಧಿತ ಆರೋಪಿಯನ್ನು ಮಂಗಳೂರು ತಾಲೂಕಿನ ಸುರತ್ಕಲ್ ಕೃಷ್ಣಾಪುರ ಚೊಕ್ಯಬೆಟ್ಟು ನಿವಾಸಿ ಮಹಮ್ಮದ್ ಶಾಫಿ ಎಂದು ಗುರುತಿಸಲಾಗಿದೆ. ಈತ 2017 ರಲ್ಲಿ ಬಂಟ್ವಾಳ ಗ್ರಾಮಾಂತರ ವ್ಯಾಪ್ತಿಯ ಕಳ್ಳತನ ಪ್ರಕರಣವೊಂದರ ಆರೋಪಿಯಾಗಿದ್ದು, ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ಇದರ ಜೊತೆಗೆ ಜಿಲ್ಲೆಯ ವಿವಿಧೆಡೆ ಬಂಟ್ವಾಳ ನಗರ ಪೊಲೀಸ್ ಠಾಣೆ, ವಿಟ್ಲ ಪೋಲಿಸ್ ಠಾಣೆ, ಉಪ್ಪಿನಂಗಡಿ, ಬೆಳ್ತಂಗಡಿ ಹಾಗೂ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಈತನ ಮೇಲೆ ಪ್ರಕರಣ ದಾಖಲಾಗಿದ್ದು, ನ್ಯಾಯಾಲಯಕ್ಕೆ‌ ಹಾಜರಾಗದೇ ಈತ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ. ಇದೀಗ ಖಚಿತ ಮಾಹಿತಿ ಪಡೆದ ಬಂಟ್ವಾಳ ಗ್ರಾಮಾಂತರ ಇನ್ಸ್ ಪೆಕ್ಟರ್ ಶಿವಕುಮಾರ್ ಹಾಗೂ ಉಪನಿರೀಕ್ಷಕರಾದ ಹರೀಶ್ ಮತ್ತು ಮೂರ್ತಿ ಅವರ ಮಾರ್ಗದರ್ಶನದಲ್ಲಿ ಸಿಬ್ಬಂದಿಗಳಾದ ಗಣೇಶ್ ಪ್ರಸಾದ್, ಪುನೀತ್ ಕುಮಾರ್ ಹಾಗೂ ವಿಜಯಕುಮಾರ್ ಅವರು ಪುತ್ತೂರಿನಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Also Read  ಓವರ್ ಟೇಕ್ ಮಾಡುವ ಭರದಲ್ಲಿ ಕಾರಿಗೆ ಢಿಕ್ಕಿ ಹೊಡೆದ ಆಟೋ ರಿಕ್ಷಾ..! ➤ ಪ್ರಯಾಣಿಕರಿಗೆ ಗಾಯ

error: Content is protected !!
Scroll to Top