ಶಾಲಾ ಬಸ್ – ಆಟೋ ರಿಕ್ಷಾ ನಡುವೆ ಭೀಕರ ಅಪಘಾತ‌; ಐವರು ಮೃತ್ಯು

(ನ್ಯೂಸ್ ಕಡಬ) newskadaba.com ಕಾಸರಗೋಡು, ಸೆ. 25. ಶಾಲಾ ಬಸ್ ಮತ್ತು ಆಟೋ ರಿಕ್ಷಾ ನಡುವೆ ಉಂಟಾದ ಭೀಕರ ಅಪಘಾತದಲ್ಲಿ ಆಟೋ ಚಾಲಕ ಸೇರಿ ಐದು ಮಂದಿ ಮೃತಪಟ್ಟ ಘಟನೆ ಇಂದು ಸಂಜೆ ಬದಿಯಡ್ಕ ಸಮೀಪದ ಪಳ್ಳತ್ತಡ್ಕದಲ್ಲಿ ನಡೆದಿದೆ.


ಮೃತಪಟ್ಟವರನ್ನು ಮೊಗ್ರಾಲ್ ಪುತ್ತೂರು ನಿವಾಸಿಗಳಾಗಿದ್ದಾರೆ ಎಂದು ತಿಳಿದುಬಂದಿದೆ. ವಿದ್ಯಾರ್ಥಿಗಳನ್ನು ಇಳಿಸಿ ಮರಳುತ್ತಿದ್ದ ಶಾಲಾ ಬಸ್ಸು ಮತ್ತು ಆಟೋ ರಿಕ್ಷಾ ನಡುವೆ ಅಪಘಾತ ನಡೆದಿದೆ. ಮೃತದೇಹಗಳನ್ನು ಕಾಸರಗೋಡು ಜನರಲ್ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಆಟೋ ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದೆ. ಮೃತಪಟ್ಟವರ ಬಗ್ಗೆ ಮಾಹಿತಿ ಇನ್ನಷ್ಟೆ ತಿಳಿದುಬರಬೇಕಿದೆ.

Also Read  ಲಾರಿ- ಕಾರು ಅಪಘಾತ ➤ ಲಾರಿ ಚಾಲಕನ ಮೇಲೆ ಹಲ್ಲೆ ನಡೆಸಿದ ತಹಶೀಲ್ದಾರ್

error: Content is protected !!
Scroll to Top