ಎಂಡಿಎಂಎ ಮಾರಾಟಕ್ಕೆ ಯತ್ನ- ಓರ್ವನ ಬಂಧನ

(ನ್ಯೂಸ್ ಕಡಬ) newskadaba.com ಉಳ್ಳಾಲ, ಸೆ. 26. ಕಾಲೇಜಿನ ಸುತ್ತ ನಿಷೇಧಿತ ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದವನನ್ನು ಉಳ್ಳಾಲ ಪೊಲೀಸರು ಬಂಧಿಸಿದ ಘಟನೆ ವರದಿಯಾಗಿದೆ.

ಬಂಧಿತನನ್ನು ದೇರಳಕಟ್ಟೆ ನಿವಾಸಿ ಶರೀಫ್ (30) ಎಂದು ಗುರುತಿಸಲಾಗಿದೆ. ಈತ ದೇರಳಕಟ್ಟೆ ಸಮೀಪ ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದು ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಉಳ್ಳಾಲ‌ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.

Scroll to Top