ಮುಂಬೈ ಲೋಕಮಾನ್ಯ ತಿಲಕ್ – ಮಂಗಳೂರು ಜಂಕ್ಷನ್ ರೈಲಿಗೆ ಹೆಚ್ಚುವರಿ ಕೋಚ್

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 26. ಪ್ರಯಾಣಿಕರ ಒತ್ತಡವನ್ನು ಕಡಿಮೆಗೊಳಿಸಲು ಮುಂಬೈ ಲೋಕಮಾನ್ಯ ತಿಲಕ್ – ಮಂಗಳೂರು ಜಂಕ್ಷನ್ ರೈಲಿಗೆ ತಾತ್ಕಾಲಿಕವಾಗಿ 3 ಸ್ಲೀಪರ್ ಕ್ಲಾಸ್ ಕೋಚ್‌ಗಳು ಮತ್ತು ಒಂದು ಜನರಲ್ ಸೆಕೆಂಡ್ ಕ್ಲಾಸ್ ಸಿಟ್ಟಿಂಗ್ ಕೋಚ್‌ಗಳನ್ನು ಒದಗಿಸಲಾಗುವುದು.

2023ರ ಸೆ. 29 ಮತ್ತು 30ರಂದು ಮುಂಬೈ ಲೋಕಮಾನ್ಯ ತಿಲಕ್‌ನಿಂದ ಹೊರಡುವ ರೈಲು (ನಂಬರ್ 01165) ಮುಂಬೈ ಲೋಕಮಾನ್ಯ ತಿಲಕ್ – ಮಂಗಳೂರು ಜಂಕ್ಷನ್ ವಿಶೇಷ ರೈಲಿಗೆ 3 ಸ್ಲೀಪರ್ ಕ್ಲಾಸ್ ಕೋಚ್‌ಗಳು ಮತ್ತು ಒಂದು ಸಾಮಾನ್ಯ ಎರಡನೇ ದರ್ಜೆಯ ಸಿಟ್ಟಿಂಗ್ ಕೋಚ್‌ನ್ನು ಸೇರ್ಪಡೆಗೊಳಿಸಲಾಗುವುದು. ಸೆ. 30 ಮತ್ತು ಅ. 01ರಂದು ಮಂಗಳೂರು ಜಂಕ್ಷನ್‌ನಿಂದ ಹೊರಡಲಿರುವ ಮಂಗಳೂರು ಜಂಕ್ಷನ್ – ಮುಂಬೈ ಲೋಕಮಾನ್ಯ ತಿಲಕ್ ವಿಶೇಷ ರೈಲಿಗೆ (ನಂಬ್ರ 01166) 3 ಸ್ಲೀಪರ್ ಕ್ಲಾಸ್ ಕೋಚ್‌ಗಳು ಮತ್ತು ಒಂದು ಸಾಮಾನ್ಯ ಎರಡನೇ ದರ್ಜೆಯ ಸಿಟ್ಟಿಂಗ್ ಕೋಚ್‌ಗಳನ್ನು ಸೇರ್ಪಡೆಗೊಳಿಸಲಾಗುವುದು ಎಂದು ರೈಲ್ವೇ ಪ್ರಕಟಣೆ ತಿಳಿಸಿದೆ.

Also Read  ಕಡಬ: ವೃದ್ಧನಿಗೆ ಹಲ್ಲೆ ನಡೆಸಿದ ಪೊಲೀಸ್ ವಿರುದ್ಧ ಶಿಸ್ತುಕ್ರಮ - ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ➤ ಪ್ರಕರಣವನ್ನು ಮುಚ್ಚುವ ಹುನ್ನಾರ - ನೀತಿ ತಂಡ ಆರೋಪ ➤ ರಾಮಣ್ಣ ಗೌಡ ಪರ ರಂಗಕ್ಕಿಳಿದ ಕಡಬ ತಾಲೂಕು ಒಕ್ಕಲಿಗ ಗೌಡ ಸಂಘ

error: Content is protected !!
Scroll to Top