(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 26. ಅಯೋಧ್ಯೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ರಾಮಮಂದಿರ ನಿರ್ಮಾಣ ಕಾರ್ಯವು ಪೂರ್ಣಗೊಳ್ಳುವ ಹಂತಕ್ಕೆ ಬಂದಿದ್ದು, ಮುಂಬರುವ ಜನವರಿಯಲ್ಲಿ ಲೋಕಾರ್ಪಣೆಗೊಳ್ಳುವುದು ಬಹುತೇಕ ಖಚಿತ ಎಂದು ಟ್ರಸ್ಟ್ ಹೇಳಿರುವುದಾಗಿ ವರದಿಯೊಂದು ಪ್ರಕಟಿಸಿದೆ.
ಮಂದಿರದ ನೆಲ ಅಂತಸ್ತಿನ ಕಾಮಗಾರಿಯನ್ನು ನವೆಂಬರ್‌ನಲ್ಲಿ ಪೂರ್ಣಗೊಳಿಸಲು ನಿರ್ಧರಿಸಲಾಗಿದ್ದು, ಮೊದಲ ಅಂತಸ್ತಿನ ಶೇ.50ರಷ್ಟು ಪಿಲ್ಲರ್ ಗಳು ಪೂರ್ಣಗೊಂಡಿವೆ. ಡಿಸೆಂಬರ್ ಅಂತ್ಯದೊಳಗೆ ಮೊದಲ ಮಹಡಿಯ ಕಾಮಗಾರಿ ಪೂರ್ಣಗೊಳಿಸುವ ಗುರಿಯನ್ನು ಟ್ರಸ್ಟ್ ಹೊಂದಿದ್ದು, 2024ರ ಜನವರಿಯಲ್ಲಿ ರಾಮಮಂದಿರ ಉದ್ಘಾಟನೆಗೊಳ್ಳಲಿದೆ ಎನ್ನಲಾಗಿದೆ. ರಾಮ ಜನ್ಮಭೂಮಿಯ ಶಂಕುಸ್ಥಾಪನೆ ಸಮಾರಂಭವು ಮುಂದಿನ ವರ್ಷ ಜನವರಿ ಮೂರನೇ ವಾರದಲ್ಲಿ ನಡೆಯಲಿದೆ. ಮೂರು ದಿನಾಂಕಗಳನ್ನು 21, 22 ಮತ್ತು 23 ಶಂಕುಸ್ಥಾಪನೆ ಸಮಾರಂಭಕ್ಕೆ ನಿಗದಿಪಡಿಸಲಾಗಿತ್ತು.