ವಿಶೇಷಚೇತನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 26. ಪ್ರಸಕ್ತ (2023-24) ಸಾಲಿನ ಪ್ರೀ ಮೆಟ್ರಿಕ್(ಮೆಟ್ರಿಕ್ ಪೂರ್ವ) ಮಾಡುತ್ತಿರುವ ವಿಶೇಷಚೇತನ ವಿದ್ಯಾರ್ಥಿಗಳು ಹೊಸದಾಗಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಎಸ್‍ಎಸ್‍ಪಿ ತಂತ್ರಾಂಶದಲ್ಲಿ https://ssp.karnataka.gov.in/ssp2324/homenew.aspx ಹಾಗೂ ನವೀಕರಣಕ್ಕೆ https://ssp.karnataka.gov.in/ssp2324/signin.aspx ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಿದ ನಂತರ ಸಂಬಂಧಿಸಿದ ಶಾಲಾ ಕಾಲೇಜುಗಳ ಲಾಗಿನ್ ಮುಖಾಂತರ ಅನುಮೋದಿಸಿ ವಿಲೇವಾರಿ ಮಾಡಿಸಬೇಕು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ, ದೂ.ಸಂ. 08272-295829 ನ್ನು ಹಾಗೂ 3 ತಾಲ್ಲೂಕಿನ ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರಾದ ಮಡಿಕೇರಿ ತಾಲ್ಲೂಕು ರಾಜೇಶ್ ಬಿ.ಆರ್. ಮೊ.ಸಂ.8073192914, ಸೋಮವಾರಪೇಟೆ ತಾಲ್ಲೂಕು ಟಿ.ಆರ್.ಹರೀಶ್ 9008685129, ವಿರಾಜಪೇಟೆ ತಾಲ್ಲೂಕು ಪ್ರಥನ್ ಕುಮಾರ್ ಸಿ.ಬಿ. 9900883654 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

error: Content is protected !!
Scroll to Top