ಸುಬ್ರಹ್ಮಣ್ಯ: ಅಕ್ರಮ ಜಾನುವಾರು ಸಾಗಾಟ- ಜಾನುವಾರ ಸಹಿತ ಪಿಕಪ್ ವಶಕ್ಕೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಸೆ. 26. ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ವಾಹನವನ್ನು ಸುಬ್ರಹ್ಮಣ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ಸೆ. 24 ರಂದು ರಾತ್ರಿ ಐವತ್ತೊಕ್ಲು ಗ್ರಾಮದ ಕುಳ್ಳಕೋಡಿ ಎಂಬಲ್ಲಿ ನಡೆದಿದೆ.

ಸೆ. 24 ರಂದು ರಾತ್ರಿ ಐವತ್ತೊಕ್ಲು ಗ್ರಾಮದ ಕುಳ್ಳಕೋಡಿ ಎಂಬಲ್ಲಿ 5 ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನವು ರಸ್ತೆಯಲ್ಲಿ ಸಿಲುಕಿ ಮುಂದಕ್ಕೆ ಹೋಗದೇ ಬಾಕಿಯಾಗಿತ್ತು ಎನ್ನಲಾಗಿದೆ. ಬಳಿಕ ಪಿಕಪ್ ನಲ್ಲಿದ್ದವರು ಸ್ಥಳದಿಂದ ಪರಾರಿಯಾಗಿದ್ದರು ಎನ್ನಲಾಗಿದೆ. ವಿಷಯ ತಿಳಿದ ಸುಬ್ರಹ್ಮಣ್ಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಜಾನುವಾರುಗಳು ಹಾಗೂ ವಾಹನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ ನಂಬ್ರ : 69/2023 ಕಲಂ: 379 ಐಪಿಸಿ ಮತ್ತು ಕಲಂ: 5,6,7,12 ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ-2020 ಯಂತೆ ಪ್ರಕರಣ ದಾಖಲಾಗಿದೆ.

Also Read  ಕೋಡಿಂಬಾಳ: ನಾದಿನಿಗೆ ಆಸಿಡ್‌ ಎರಚಿದ ಪ್ರಕರಣ ➤ ಆರೋಪಿಗೆ ಜಾಮೀನು ಮಂಜೂರು

error: Content is protected !!
Scroll to Top