ಬಾಲಕಿಯ ಅಪಹರಿಸಿ ಚಲಿಸುವ ವಾಹನದಲ್ಲಿ ಗ್ಯಾಂಗ್ ರೇಪ್- ಅರೆಸ್ಟ್

(ನ್ಯೂಸ್ ಕಡಬ) newskadaba.com ಉತ್ತರ ಪ್ರದೇಶ, ಸೆ. 26. 16 ವರ್ಷದ ಬಾಲಕಿಯನ್ನು ಅಪಹರಿಸಿ ಚಲಿಸುವ ವಾಹನದಲ್ಲಿ ಸಾಮೂಹಿಕ ಅತ್ಯಾಚಾರ ನಡೆಸಿ ತಲೆಮರೆಸಿಕೊಂಡಿದ್ದ ಮೂವರು ಕಾಮುಕರನ್ನು ಪೊಲೀಸರು ಬಂಧಿಸಿದ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.

ಆರೋಪಿಗಳು ಗೋಶಾಲೆಯನ್ನು ಸ್ವಚ್ಛಗೊಳಿಸುವ ನೆಪದಲ್ಲಿ ಅಪ್ರಾಪ್ತ ಬಾಲಕಿಯನ್ನು ಕರೆದು ನಂತರ ಸಾಮೂಹಿಕ ಅತ್ಯಾಚಾರ ನಡೆಸಿ ಪರಾರಿಯಾಗಿದ್ದರು ಎಂದು ಆರೋಪಿಸಲಾಗಿತ್ತು. ಸಂತ್ರಸ್ಥೆಗೆ ಮೊದಲು ನೆರೆಮನೆಯಾತ ಅತ್ಯಾಚಾರ ನಡೆಸಿ ನಂತರ ಆತನ ಇಬ್ಬರು ಸಹಚರರು ಆಕೆಯನ್ನು ಅಪಹರಿಸಿ, ಚಲಿಸುವ ವಾಹನದಲ್ಲಿ ಆಕೆಯ ಮೇಲೆ ಅತ್ಯಾಚಾರವೆಸಗಿ, ನಂತರ ಮೂವರು ಆರೋಪಿಗಳು ಆಕೆಯನ್ನು ಗೋಶಾಲೆಯ ಹೊರಗೆ ಬಿಸಾಡಿದ್ದರು. ಪ್ರಜ್ಞೆ ಮರಳಿದ ನಂತರ ಬಾಲಕಿ ಮನೆಗೆ ತಲುಪಿ ತನ್ನ ಪೋಷಕರಿಗೆ ವಿಷಯ ತಿಳಿಸಿದ್ದಳು. ಘಟನೆಗೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿರುವುದಾಗಿ ಮೂಲಗಳು ತಿಳಿಸಿವೆ.

Also Read  ಹೆಣ್ಣು ಕೊಡುವುದಿಲ್ಲವೆಂದು ಆತ್ಮಹತ್ಯೆಗೆ ಯತ್ನಿಸಿದ ಯುವಕ..!

error: Content is protected !!
Scroll to Top