ಮಾಜಿ ಸಿಎಂ ವೀರೇಂದ್ರ ಪಾಟೀಲರ ಪತ್ನಿ ಶಾರದಾ ಪಾಟೀಲ ನಿಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 26. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮಾಜಿ ಮುಖ್ಯಮಂತ್ರಿ ದಿ. ವೀರೇಂದ್ರ ಪಾಟೀಲರ ಪತ್ನಿ ಶಾರದಾ ಪಾಟೀಲ (93) ಅವರು ಬೆಂಗಳೂರಿನ ಸದಾಶಿವನಗರದ ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ಪಾರ್ಥೀವ ಶರೀರವನ್ನು ಚಿಂಚೋಳಿಗೆ ತೆಗೆದುಕೊಂಡು ಹೋಗಲು ಕುಟಂಬಸ್ಥರು ತೀರ್ಮಾನಿಸಲಾಗಿದ್ದು, ಚಿಂಚೋಳಿಯಲ್ಲಿರುವ ವೀರೇಂದ್ರ ಪಾಟೀಲರ ಸಮಾಧಿ ಪಕ್ಕದಲ್ಲೇ ಶಾರದಾ ಪಾಟೀಲರ ಅಂತ್ಯಕ್ರಿಯೆ ಬುಧವಾರ ಮಧ್ಯಾಹ್ನ ನಡೆಯಲಿದೆ ಎಂದು ಕೈಲಾಸನಾಥ ಪಾಟೀಲ ತಿಳಿಸಿದ್ದಾರೆ. ಕರ್ನಾಟಕ ಪ್ರಬಲ ಲಿಂಗಾಯಿತ ಸಮುದಾಯದ ನಾಯಕರಾಗಿದ್ದ ವೀರೇಂದ್ರ ಪಾಟೀಲ್ ಅವರು 1989 ರಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಐತಿಹಾಸಿಕ ಗೆಲುವು ತಂದುಕೊಟ್ಟವರಲ್ಲಿ ಪ್ರಮುಖರು. ಹಠಾತ್ತನೆ ಮುಖ್ಯಮಂತ್ರಿ ಸ್ಥಾನವನ್ನು ಕಳೆದುಕೊಂಡಿದ್ದ ಅವರು 1997 ಮಾರ್ಚ್ 14 ರಂದು ಆನಾರೋಗ್ಯದ ಕಾರಣ ನಿಧನರಾಗಿದ್ದರು.

Also Read  ಕೆಎಸ್ಸಾರ್ಟಿಸಿ ನೌಕರರ ಮುಷ್ಕರ ಮತ್ತೆ ಮುಂದುವರಿಕೆ ➤ ಸಚಿವರೊಂದಿಗೆ ನಡೆದ ಕೊನೆಯ ಸಂಧಾನ ವಿಫಲ

error: Content is protected !!
Scroll to Top