22 ನೇ ದಕ್ಷಿಣ ಕನ್ನಡ ಸಾಹಿತ್ಯ ಸಮ್ಮೇಳನ ಪ್ರಯುಕ್ತ ಅಂಚೆ ಕಾರ್ಡಿನಲ್ಲಿ ಚಿತ್ರ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ.08. ಮಾರ್ಚ್ 5, 6 ಮತ್ತು 7 ರಂದು 3 ದಿನಗಳ ಕಾಲ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಜರಗಲಿರುವ 22 ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಯುಕ್ತ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಮೂಲದ ಸಾಹಿತಿಗಳ, ಸಾಧಕರ, ಕವಿಗಳ, ರಾಜಕೀಯ ಮತ್ತು ಸಾಮಾಜಿಕ ಮುತ್ಸದ್ದಿಗಳ ಚಿತ್ರಗಳನ್ನು ಆಹ್ವಾನಿಸಲಾಗಿದೆ.

10ನೇ ತರಗತಿಯ ಒಳಗಿನ ವಿದ್ಯಾರ್ಥಿಗಳು ಹಾಗೂ ಪಿಯುಸಿ ಮತ್ತು ಪದವಿ ಕಾಲೇಜು ವಿದ್ಯಾರ್ಥಿಗಳು ಅಂಚೆಕಾರ್ಡಿನಲ್ಲಿ ಕೈಯಲ್ಲಿ ಬಿಡಿಸಿದ ಚಿತ್ರಗಳನ್ನು ಫೆಬ್ರವರಿ 28ರೊಳಗಾಗಿ ಶ್ರೀ ಜಾನ್ ಚಂದ್ರನ್, ಸಂಚಾಲಕರು, ಅಂಚೆ ಕಾರ್ಡಿನಲ್ಲಿ ಚಿತ್ರ ವಿಭಾಗ, ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು,  ಕಲ್ಕೂರ ಪ್ರತಿಷ್ಠಾನ, ‘ಶ್ರೀಕೃಷ್ಣ ಸಂಕೀರ್ಣ’, ಕೊಡಿಯಾಲ್‍ಬೈಲ್, ಮಂಗಳೂರು-3 ಫೋನ್: 2492239 ಈ ವಿಳಾಸಕ್ಕೆ ಕಳುಹಿಸಿಕೊಡಬೇಕು. ಆಯ್ಕೆ ಸಮಿತಿಯಿಂದ ಆಯ್ಕೆಗೊಂಡ 150 ಚಿತ್ರಗಳನ್ನು ಪ್ರಕಟಗೊಳಿಸುವುದಲ್ಲದೆ ಎರಡು ವಿಭಾಗಗಳಲ್ಲಿ ಪ್ರಥಮ, ದ್ವಿತೀಯ, ತೃತೀಯ, 6 ಜನ ಕೃತಿಕಾರರನ್ನು ಸಮ್ಮೇಳನದಲ್ಲಿ ವಿಶೇಷವಾಗಿ ಗೌರವಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ಪ್ರಕಟಣೆ ತಿಳಿಸಿದೆ.

Also Read  ಮಂಗಳೂರು ಮಹಾನಗರಪಾಲಿಕೆಯ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ನಿಷೇಧ ➤ ಕಾನೂನು ಉಲ್ಲಂಘಿಸಿದರೆ ಲೈಸನ್ಸ್ ರದ್ದು

error: Content is protected !!
Scroll to Top