ಶಾಲಾ ವಿದ್ಯಾರ್ಥಿನಿಗೆ ಕಿರುಕುಳ – ಯುವಕನ ವಿರುದ್ದ ದೂರು ದಾಖಲು

(ನ್ಯೂಸ್ ಕಡಬ) newskadaba.com ವಿಟ್ಲ, ಸೆ. 29. ಶಾಲಾ ವಿದ್ಯಾರ್ಥಿನಿಯೊಬ್ಬಳನ್ನು ಹಿಂಬಾಲಿಸಿ ಕಿರುಕುಳ ನೀಡಿದ ಪ್ರಕರಣದಡಿ ಯುವಕನ ವಿರುದ್ದ ವಿಟ್ಲ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.


ಪೆರುವಾಯಿ ಮೂಲದ ಯುವಕನೋರ್ವ ಕೇಪು ಗ್ರಾಮದ 9ನೇ ತರಗತಿ ವಿದ್ಯಾರ್ಥಿನಿಯನ್ನು ಹಲವು ದಿನಗಳಿಂದ ಹಿಂಬಾಲಿಸುತ್ತಿದ್ದು, ಮೊಬೈಲ್ ನಂಬರ್ ನೀಡುವಂತೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಅಲ್ಲದೇ ಇತ್ತೀಚೆಗೆ ಶಾಲೆ ಸಮೀಪ ಬಂದು ಬಾಲಕಿಯನ್ನು ಬೈಕ್ ನಲ್ಲಿ ಕೂರುವಂತೆ ಹೇಳಿದ್ದು, ಈ ವಿಚಾರವನ್ನು ಬೇರೆ ಕಡೆ ಹೇಳಬಾರದೆಂದೂ ಬೆದರಿಸಿರುವುದಾಗಿ ಆರೋಪಿಸಲಾಗಿದೆ. ಇದರಿಂದ ಭಯಗೊಂಡ ಬಾಲಕಿ ವಿಷಯವನ್ನು ಶಾಲೆಯ ಶಿಕ್ಷಕರಲ್ಲಿ ತಿಳಿಸಿದ್ದು, ಅವರು ಪೋಷಕರಿಗೆ ಮಾಹಿತಿ ತಿಳಿಸಿದ್ದು, ಈ ಹಿನ್ನೆಲೆಯಲ್ಲಿ ಠಾಣೆಗೆ ದೂರು ದಾಖಲಿಸಲಾಗಿದೆ.

Also Read  ಬೆಳ್ಳಾರೆ: ಪಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನ- ದೂರು ದಾಖಲು

error: Content is protected !!
Scroll to Top