(ನ್ಯೂಸ್ ಕಡಬ) newskadaba.com ವಿಟ್ಲ, ಸೆ. 29. ಕ್ಷುಲ್ಲಕ ಕಾರಣಕ್ಕೆ ಸಂಬಂಧಿಸಿ ಆಟೋ ಚಾಲಕನಿಗೆ ತಂಡವೊಂದು ಅಡ್ಡಗಟ್ಟಿ ಹಲ್ಲೆ ನಡೆಸಿದ ಘಟನೆ ವಿಟ್ಲದ ಕಂಬಳಬೆಟ್ಟು ಎಂಬಲ್ಲಿ ನಡೆದಿದೆ.
ಹಲ್ಲೆಗೊಳಗಾದವರನ್ನು ವಿಟ್ಲ ಕಸಬಾ ಗ್ರಾಮದ ನಿವಾಸಿ ಮಹಮ್ಮದ್ ಸುಹೈಲ್ (25) ಎಂದು ಗುರುತಿಸಲಾಗಿದೆ. ಸೆ. 27 ರಂದು ರಾತ್ರಿ ಕಂಬಳಬೆಟ್ಟುವಿನಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮಕ್ಕೆ ಹೋಗುವ ಸಂದರ್ಭ ಸುಹೈಲ್ ಹಾಗೂ ಆರೋಪಿ ಹಾರೀಸ್ ರವರಿಗೆ ಮಾತುಕತೆಯಾಗಿತ್ತು. ಇದರ ಮುಂದುವರಿದ ಭಾಗವಾಗಿ ಗುರುವಾರ ಬೆಳಗ್ಗೆ ಸುಹೈಲ್ ತನ್ನ ಅಟೋರಿಕ್ಷಾದಲ್ಲಿ ಪ್ರಯಾಣಿಕರನ್ನು ಕುಳ್ಳಿರಿಸಿಕೊಂಡು ವಿಟ್ಲಮುಡ್ನೂರು ಗ್ರಾಮದ ಕಂಬಳಬೆಟ್ಟು ಎಂಬಲ್ಲಿ ತಲುಪಿದಾಗ ಆರೋಪಿ ಹಾರೀಸ್ ಎಂಬಾತನು ಆತನ ಅಟೋರಿಕ್ಷಾದಲ್ಲಿ ಅಶ್ರಫ್ ಉರಿಮಜಲು, ರಿಯಾಝ್ ಉರಿಮಜಲು ಮತ್ತು ಅಚ್ಚುಕು ಕೋಲ್ಪೆರವರೊಂದಿಗೆ ಬಂದು ಸುಹೈಲ್ ಅಟೊ ರಿಕ್ಷಾಕ್ಕೆ ಅಡ್ಡ ಇಟ್ಟು ತಡೆದು ನಿಲ್ಲಿಸಿ ಅವ್ಯಾಚವಾಗಿ ಬೈದು, ಹಲ್ಲೆ ನಡೆಸಿ ಬೆದರಿಕೆ ಹಾಕಿ ಪರಾರಿಯಾಗಿದ್ದಾರೆ ಎಂದು ದೂರಲಾಗಿದೆ. ಈ ಕುರಿತು ಸುಹೈಲ್ ನೀಡಿದ ದೂರಿನಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.